ನಾಳೆ ಪ್ರಮಾಣ ವಚನ ಸ್ವೀಕಾರ

ಕೋಲಕಾತಾ (ಬಂಗಾಳ) – ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಭಾಜಪದ ಶಾಸಕಾಂಗ ಪಕ್ಷವು ಶುಭೇಂದು ಅಧಿಕಾರಿ ಅವರ ಹೆಸರನ್ನು ಆಯ್ಕೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆ, ಮೇ 9 ರಂದು ಕೋಲಕಾತಾದಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶುಭೇಂದು ಅಧಿಕಾರಿ ಅವರು 2021ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮತ್ತು ಪ್ರಸ್ತುತ ಚುನಾವಣೆಯಲ್ಲಿ ಭವಾನಿಪುರ ಕ್ಷೇತ್ರದಿಂದ ಅಂದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು. ಶುಭೇಂದು ಅಧಿಕಾರಿ ಅವರು ಈ ಹಿಂದೆ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿದ್ದರು ಮತ್ತು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮಮತಾ ಬ್ಯಾನರ್ಜಿ ಅವರ ಆಪ್ತರೆಂದು ಪರಿಗಣಿಸಲ್ಪಟ್ಟಿದ್ದ ಅವರು; ಶಾರದಾ ಹಗರಣದ ಪ್ರಕರಣದ ನಂತರ ತೃಣಮೂಲ ಕಾಂಗ್ರೆಸ್ ತ್ಯಜಿಸಿ ಭಾಜಪ ಸೇರಿದ್ದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !