(ಸಿ.ಡಿ.ಎಸ್. ಎಂದರೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಅಂದರೆ ಮೂರೂ ಸೇನಾಪಡೆಗಳ ಮುಖ್ಯಸ್ಥರು)

ನವದೆಹಲಿ – ಭಾರತ ಸರಕಾರವು ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ದೇಶದ ಮುಂದಿನ ‘ಚೀಫ್ ಆಫ್ ಡಿಫೆನ್ಸ್ ಸ್ಟಾಫ್’ (ಸಿ.ಡಿ.ಎಸ್.) ಆಗಿ ನೇಮಕ ಮಾಡಿದೆ. ಅವರು ರಕ್ಷಣಾ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯೂ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಪ್ರಸ್ತುತ ‘ಸಿ.ಡಿ.ಎಸ್.’ ಆಗಿರುವ ಅನಿಲ್ ಚೌಹಾಣ್ ಅವರ ಅಧಿಕಾರಾವಧಿಯು ಮೇ 30 ರಂದು ಮುಕ್ತಾಯಗೊಳ್ಳಲಿದೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯ ಸಚಿವಾಲಯದಲ್ಲಿ ಸೇನಾ ಸಲಹೆಗಾರರಾಗಿದ್ದಾರೆ. ಇದಕ್ಕೂ ಮೊದಲು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಮತ್ತು ಸೆಂಟ್ರಲ್ ಕಮಾಂಡ್ ನ ‘ಜಿಒಸಿ-ಇನ್-ಸಿ’ (ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್) ನಂತಹ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ದೇಶದ ಮೂರನೇ ‘ಚೀಫ್ ಆಫ್ ಡಿಫೆನ್ಸ್ ಸ್ಟಾಫ್’ ಆಗಲಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!