
ಪೇಶಾವರ (ಪಾಕಿಸ್ತಾನ) – ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯಲ್ಲಿ ಮೇ ೯ ರ ರಾತ್ರಿ ಪೊಲೀಸ್ ಚೌಕಿಯ ಬಳಿ ನಾಲ್ಕು ಚಕ್ರದ ವಾಹನವೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಮತ್ತು ಆ ನಂತರ ಗುಂಡಿನ ಚಕಮಕಿಯೂ ನಡೆದಿದೆ. ಇದರಲ್ಲಿ ೩ ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅನೇಕರು ಗಾಯಗೊಂಡಿರುವ ಭೀತಿ ವ್ಯಕ್ತಪಡಿಸಲಾಗಿದೆ. ಘಟನೆಯ ಸಮಯದಲ್ಲಿ ಚೌಕಿಯಲ್ಲಿ ೧೫ ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಅವರು, ಒಬ್ಬ ಆತ್ಮಾಹುತಿ ದಾಳಿಕೋರನು ಸ್ಫೋಟಕ ತುಂಬಿದ ವಾಹನವನ್ನು ಭದ್ರತಾ ಚೌಕಿಯ ಬಳಿ ಸ್ಫೋಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಈ ಸ್ಫೋಟವು ಎಷ್ಟು ಶಕ್ತಿಶಾಲಿಯಾಗಿತ್ತು ಎಂದರೆ, ಚೌಕಿಯು ಸಂಪೂರ್ಣವಾಗಿ ಧ್ವಂಸಗೊಂಡಿದೆ. ಇದರ ಬೆನ್ನಲ್ಲೇ ಬಂಡುಕೋರರು ಗುಂಡಿನ ದಾಳಿ ಆರಂಭಿಸಿದರು ಮತ್ತು ಸ್ಥಳಕ್ಕೆ ಧಾವಿಸುತ್ತಿದ್ದ ಪೊಲೀಸ್ ತಂಡದ ಮೇಲೆ ಹೊಂಚು ಹಾಕಿ ದಾಳಿ ನಡೆಸಿದರು. ಈವರೆಗೆ ಯಾವುದೇ ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation