
ಗೈಬಂಧಾ (ಬಾಂಗ್ಲಾದೇಶ) – ಇಲ್ಲಿನ ಶಾಲೆಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದೆ. ಈ ಘಟನೆಯಿಂದ ಸ್ಥಳೀಯ ಹಿಂದೂ ಸಮುದಾಯದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸಂತ್ರಸ್ತ ಬಾಲಕಿಯ ತಂದೆ ನಿತಾಯಿ ದಾಸ್ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದರೂ, ಇದುವರೆಗೂ ಬಾಲಕಿಯ ಪತ್ತೆಯಾಗಿಲ್ಲ. ಬಾಲಕಿಯ ಕುಟುಂಬದವರು ಇದರ ಹಿಂದೆ ಅಪಹರಣವಲ್ಲದೆ ಬಲವಂತದ ಮತಾಂತರದ ಸಂಚು ಇದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ ಬಾಲಕಿಯರನ್ನು ಗುರಿಯಾಗಿಸಿಕೊಂಡು ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತರು ಗಮನಕ್ಕೆ ತಂದಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman