ಸಚಿವ ಸಂಪುಟದಲ್ಲಿ ೯ ಸಚಿವರಿಗೆ ಸ್ಥಾನ

ಚೆನ್ನೈ (ತಮಿಳುನಾಡು) – ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷದ ಮುಖ್ಯಸ್ಥ ಜೋಸೆಫ್ ವಿಜಯ್ ಅವರು ಮೇ ೧೦ ರಂದು ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ವಿಜಯ್ ಅವರೊಂದಿಗೆ ೮ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಅರ್ಲೇಕರ್ ಅವರು ಮೇ ೧೩ ರೊಳಗೆ ಅಥವಾ ಅದಕ್ಕೂ ಮೊದಲು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಜೋಸೆಫ್ ವಿಜಯ್ ಅವರಿಗೆ ಸೂಚಿಸಿದ್ದಾರೆ.
TVK chief C Joseph Vijay sworn in as Tamil Nadu’s new chief minister
9 ministers inducted into Cabinetpic.twitter.com/oHiigEHhJh
— Sanatan Prabhat (@SanatanPrabhat) May 10, 2026
ಜೋಸೆಫ್ ವಿಜಯ್ ಅವರಿಂದ ಮೂರು ಪ್ರಮುಖ ಘೋಷಣೆಗಳು
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜೋಸೆಫ್ ವಿಜಯ್ ಅವರು ನಾಗರಿಕರಿಗೆ ೨೦೦ ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುವುದು ಮತ್ತು ಮಾದಕ ವಸ್ತುಗಳ ಸಾಗಣೆಯನ್ನು ತಡೆಯಲು ‘ವಿಶೇಷ ಕಾರ್ಯಪಡೆ’ ರಚಿಸುವುದಾಗಿ ಘೋಷಣೆ ಮಾಡಿದರು. (ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ರಾಜಕೀಯ ಲಾಭಕ್ಕಾಗಿ ಉಚಿತ ವಸ್ತುಗಳನ್ನು ನೀಡುವ ಮೂಲಕ ಆಮಿಷವೊಡ್ಡುತ್ತಿವೆ; ಆದರೆ ಇದಕ್ಕಾಗಿ ಖರ್ಚು ಮಾಡುವ ಹಣ ಮಾತ್ರ ಜನರ ಜೇಬಿನಿಂದಲೇ ಬರುತ್ತದೆ ಎಂಬುದು ಜನರಿಗೆ ಹೇಗೆ ತಿಳಿಯುತ್ತಿಲ್ಲ? – ಸಂಪಾದಕರು)
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !