ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಒಪ್ಪಿಸುವ ಷರತ್ತಿಗೆ ಪಟ್ಟು

ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ಧ ನಿಲ್ಲಿಸುವ ಇರಾನ್‌ನ ಹೊಸ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ‘ನಾನು ಇರಾನ್ ಪ್ರತಿನಿಧಿಗಳ ಉತ್ತರವನ್ನು ಓದಿದೆ. ಅದು ನನಗೆ ಸ್ವಲ್ಪವೂ ಇಷ್ಟವಾಗಲಿಲ್ಲ. ಅದನ್ನು ಒಪ್ಪಲು ಸಾಧ್ಯವಿಲ್ಲ, ಎಂದು ಈ ಪ್ರಸ್ತಾವನೆಯನ್ನು ತಿರಸ್ಕರಿಸುವಾಗ ಅವರು ಪ್ರತಿಕ್ರಿಯಿಸಿದ್ದಾರೆ. ಇರಾನ್‌ನ ಸರಕಾರಿ ಮಾಧ್ಯಮಗಳ ಪ್ರಕಾರ, ಇರಾನ್ ೧೦ ಮೇ ರಂದು ಪಾಕಿಸ್ತಾನದ ಮೂಲಕ ಅಮೆರಿಕಕ್ಕೆ ಯುದ್ಧ ನಿಲ್ಲಿಸುವ ಕುರಿತು ಹೊಸ ಪ್ರಸ್ತಾವನೆಯನ್ನು ಕಳುಹಿಸಿತ್ತು. ಈ ಪ್ರಸ್ತಾವನೆಯಲ್ಲಿ ಯುದ್ಧವನ್ನು ಕೊನೆಗೊಳಿಸುವುದು, ಪರ್ಷಿಯನ್ ಗಲ್ಫ್ ಮತ್ತು ಹಾರ್ಮುಜ್ ಜಲಸಂಧಿ (ಎರಡು ದೊಡ್ಡ ಜಲಶಯಗಳನ್ನು ಸಂಪರ್ಕಿಸುವ ಜಲಮಾರ್ಗ) ಪ್ರದೇಶಗಳಲ್ಲಿ ಕಡಲ ಸುರಕ್ಷತೆಯನ್ನು ಖಚಿತಪಡಿಸುವುದು, ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಅಣುಶಕ್ತಿ ಕಾರ್ಯಕ್ರಮದ ಬಗ್ಗೆ ಚರ್ಚಿಸುವುದು, ಈ ಅಂಶಗಳನ್ನು ಒಳಗೊಂಡಿತ್ತು.
ಅಮೆರಿಕವು ಕಳೆದ ವಾರದಲ್ಲಿ ಇರಾನ್‌ಗೆ ೧೪ ಅಂಶಗಳ ಪ್ರಸ್ತಾವನೆಯನ್ನು ಕಳುಹಿಸಿತ್ತು!
ಅಮೆರಿಕವು ಕಳೆದ ವಾರ ಇರಾನ್‌ಗೆ ೧೪ ಅಂಶಗಳ ಪ್ರಸ್ತಾವನೆಯನ್ನು ಕಳುಹಿಸಿತ್ತು. ಅದರ ಪ್ರಕಾರ ಇರಾನ್ ಕನಿಷ್ಠ ೧೨ ವರ್ಷಗಳ ಕಾಲ ಯುರೇನಿಯಂ ಪುಷ್ಟೀಕರಣವನ್ನು ನಿಲ್ಲಿಸಬೇಕಾಗುತ್ತದೆ ಮತ್ತು ಅವರ ಬಳಿ ಇರುವ ೬೦ ಶೇಕಡಾ ಸಮೃದ್ಧ ಯುರೇನಿಯಂ ಅನ್ನು ಅಮೆರಿಕಕ್ಕೆ ಒಪ್ಪಿಸಬೇಕಾಗುತ್ತದೆ. ಇದಕ್ಕೆ ಪ್ರತಿಯಾಗಿ ಅಮೆರಿಕವು ನಿರ್ಬಂಧಗಳನ್ನು ಸಡಿಲಗೊಳಿಸುತ್ತದೆ, ಇರಾನ್‌ನ ಮುಟ್ಟುಗೋಲು ಹಾಕಿಕೊಳ್ಳಲಾದ ಶತಕೋಟಿ ಡಾಲರ್ ಆಸ್ತಿಯನ್ನು ಮುಕ್ತಗೊಳಿಸುತ್ತದೆ, ಹಾಗೆಯೇ ಇರಾನಿ ಬಂದರುಗಳ ಮೇಲಿನ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುತ್ತದೆ. ಆದರೆ ಇರಾನ್ ತನ್ನ ಅಣುಶಕ್ತಿ ಕಾರ್ಯಕ್ರಮ ಮತ್ತು ಹೆಚ್ಚು ಪುಷ್ಟೀಕರಿಸಿದ ಯುರೇನಿಯಂ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳಲು ನಿರಾಕರಿಸಿತ್ತು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation