ವಿದ್ಯಾರ್ಥಿಗಳಿಗೆ ಗೋಲು ಟೋಪಿ, ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಒತ್ತಡ
ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರ ಅಮಾನತು
(ಹಿಜಾಬ್ ಎಂದರೆ ಮುಸಲ್ಮಾನ ಮಹಿಳೆಯರು ತಲೆ ಮತ್ತು ಕುತ್ತಿಗೆಯನ್ನು ಮರೆಮಾಡಲು ಧರಿಸುವ ವಸ್ತ್ರ)

ಸಂಭಲ್ (ಉತ್ತರ ಪ್ರದೇಶ) – ಸಂಭಲ್ ಜಿಲ್ಲೆಯ ಜಾಲಬ್ ಸರಾಯ್ ಸರಕಾರಿ ಶಾಲೆಯಲ್ಲಿ ಇಬ್ಬರು ಮುಸಲ್ಮಾನ ಶಿಕ್ಷಕರು ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಇಸ್ಲಾಮಿಕ್ ಪದ್ಧತಿಗಳನ್ನು ಅನುಸರಿಸುವಂತೆ ಪ್ರೇರೇಪಿಸುತ್ತಿರುವುದು ಬೆಳಕಿಗೆ ಬಂದಿದೆ. ಅಂಜರ್ ಅಹ್ಮದ್ ಮತ್ತು ಮಹಮ್ಮದ್ ಗುಲ್ ಐಜಾಜ್ ಎಂದು ಶಿಕ್ಷಕರನ್ನು ಗುರುತಿಸಲಾಗಿದೆ. ಇವರು ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಮತ್ತು ವಿದ್ಯಾರ್ಥಿಗಳಿಗೆ ಇಸ್ಲಾಮಿಕ್ ಟೋಪಿ ಧರಿಸಿ ಪ್ರಾರ್ಥನೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೆ ಶಾಲೆಯ ಆವರಣದಲ್ಲಿ ಇತರ ಧರ್ಮಗಳ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದರು.
೧. ಈ ಶಾಲೆಗೆ ಸಂಬಂಧಿಸಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಈ ಮಾಹಿತಿ ಬಹಿರಂಗವಾಗಿದೆ. ವಿಡಿಯೋ ಗಮನಕ್ಕೆ ಬಂದ ತಕ್ಷಣ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಅಂಕಿತ ಖಂಡೇಲವಾಲ್ ಅವರ ನಿರ್ದೇಶನದಂತೆ ಈ ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ, ಮುಖ್ಯೋಪಾಧ್ಯಾಯರಾದ ಬಾಲೇಶ್ ಕುಮಾರ್ ಅವರ ವಿರುದ್ಧವೂ ಕ್ರಮ ಕೈಗೊಂಡು ಅಮಾನತುಗೊಳಿಸಲಾಗಿದೆ. ಉನ್ನತ ಅಧಿಕಾರಿಗಳು ಈ ಸಂಪೂರ್ಣ ಪ್ರಕರಣವನ್ನು ಮುಚ್ಚಿಟ್ಟಿರುವ ಮತ್ತು ನಿರ್ಲಕ್ಷ್ಯ ವಹಿಸಿರುವ ಆರೋಪವಿದೆ.
೨. ಜಿಲ್ಲಾಧಿಕಾರಿಗಳು ಈ ಪ್ರಕರಣದ ಆಳವಾದ ತನಿಖೆಗಾಗಿ ಮುಖ್ಯ ಅಭಿವೃದ್ಧಿ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯು ಸಂಪೂರ್ಣ ಪ್ರಕರಣದ ತನಿಖೆ ನಡೆಸಿ ಇನ್ನು ಯಾರು ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಲಿದೆ.
೩. ಶಿಕ್ಷಣದ ಹೆಸರಿನಲ್ಲಿ ಯಾವುದೇ ರೀತಿಯ ಧಾರ್ಮಿಕ ಅಥವಾ ವೈಚಾರಿಕ ಒತ್ತಡ ಸಹಿಸುವುದಿಲ್ಲ ಮತ್ತು ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!