ಪ್ರಶ್ನೆ ಪತ್ರಿಕೆ ಸೋರಿಕೆಯ ವ್ಯಾಪ್ತಿ ದೇಶಾದ್ಯಂತ ಹರಡಿದೆ!

ನಾಸಿಕ್ – ಪ್ರತಿ ವರ್ಷದಂತೆ ಈ ವರ್ಷವೂ ‘ನೀಟ್’ ಪರೀಕ್ಷೆಯನ್ನು ಮೇ ೩ ರಂದು ನಡೆಸಲಾಯಿತು; ಆದರೆ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಯು ನಾಸಿಕ್‌ನಿಂದ ‘ಟೆಲಿಗ್ರಾಮ್’ ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಇದರಿಂದಾಗಿ ಮತ್ತೆ ಹೊಸದಾಗಿ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪೊಲೀಸರು ೩೦ ವರ್ಷದ ಓರ್ವ ಯುವಕನನ್ನು ಬಂಧಿಸಿದ್ದಾರೆ. ಆತನ ವಿಚಾರಣೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ೨೨ ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ ೨.೫ ಲಕ್ಷ ವಿದ್ಯಾರ್ಥಿಗಳು ಮಹಾರಾಷ್ಟ್ರದವರಾಗಿದ್ದರು.
೧೨ ರಿಂದ ೧೫ ತಿಂಗಳ ಹಿಂದೆಯೇ ಒಂದು ಸಂಭಾವ್ಯ ಪ್ರಶ್ನೆಪತ್ರಿಕೆಯು ದೊಡ್ಡ ಪ್ರಮಾಣದಲ್ಲಿ ಪ್ರಸಾರವಾಗಿತ್ತು. ಅದು ೧೫೦ ಪುಟಗಳದ್ದಾಗಿತ್ತು. ಅದರಲ್ಲಿ ಒಟ್ಟು ೪೧೦ ಪ್ರಶ್ನೆಗಳಿದ್ದವು. ಅವುಗಳಲ್ಲಿ ವಿಶೇಷವಾಗಿ ರಸಾಯನಶಾಸ್ತ್ರದ ೧೨೦ ಪ್ರಶ್ನೆಗಳು ‘ನೀಟ್’ ಪರೀಕ್ಷೆಯ ಪ್ರಶ್ನೆಗಳಂತೆಯೇ ಇದ್ದವು ಎಂದು ಹೇಳಲಾಗುತ್ತಿದೆ. ಸೋರಿಕೆಯಾದ ಪ್ರಶ್ನೆಪತ್ರಿಕೆಯ ಪ್ರತಿಯನ್ನು ನಾಸಿಕ್‌ನಲ್ಲಿ ತಯಾರಿಸಲಾಗಿತ್ತು. ಆ ಪ್ರತಿಯು ಹರಿಯಾಣದವರೆಗೆ ತಲುಪಿತ್ತು. ಈ ಪ್ರಶ್ನೆಪತ್ರಿಕೆಯ ೧೦ ಸೆಟ್‌ಗಳನ್ನು ಸಿದ್ಧಪಡಿಸಲಾಗಿತ್ತು. ಆ ನಂತರ ಈ ಪ್ರಶ್ನೆಪತ್ರಿಕೆಯು ಬಿಹಾರ, ಆಂಧ್ರಪ್ರದೇಶ, ಜಮ್ಮು-ಕಾಶ್ಮೀರ ಮತ್ತು ರಾಜಸ್ಥಾನ ರಾಜ್ಯಗಳವರೆಗೂ ತಲುಪಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!