
ಮುಂಬಯಿ, ಮೇ ೧೨ (ವಾರ್ತೆ) – ಮಹಾರಾಷ್ಟ್ರದ ರಾಜ್ಯಪಾಲರಾದ ಜಿಷ್ಣು ದೇವ್ ವರ್ಮಾ ಅವರಿಗೆ ಸನಾತನ ಸಂಸ್ಥೆಯ ವತಿಯಿಂದ ಮೇ ೧೭ ರಂದು ಆಯೋಜಿಸಲಾದ ಶ್ರೀ ರಾಜಮಾತಂಗಿ ಮಹಾಯಾಗದ ಆಮಂತ್ರಣವನ್ನು ನೀಡಲಾಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ್ ರಾಜಹಂಸ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ್ ಶಿಂದೆ ಅವರು ಮೇ ೧೨ ರಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಮಹಾಯಾಗದ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಜಿಷ್ಣು ದೇವ್ ವರ್ಮಾ ಅವರು, “ಯಾಗಕ್ಕೆ ಬರಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದರು. ಈ ವೇಳೆ ಸನಾತನ ಸಂಸ್ಥೆಯ ಸೌ. ಧನಶ್ರೀ ಕೇಳಶೀಕರ್, ಶ್ರೀ. ಅಶೋಕ್ ದಾಭೋಲ್ಕರ್ ಮತ್ತು ಶ್ರೀ. ಪ್ರೀತಮ್ ನಾಚಣಕರ್ ಉಪಸ್ಥಿತರಿದ್ದರು.

ಶ್ರೀ. ಚೇತನ್ ರಾಜಹಂಸ ಅವರು ರಾಜ್ಯಪಾಲರಿಗೆ ಸನಾತನ ಸಂಸ್ಥೆಯ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು, ಹಾಗೂ ಗೋವಾದ ರಾಮನಾಥಿಯಲ್ಲಿರುವ ಸನಾತನ ಆಶ್ರಮಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದರು. ಈ ವೇಳೆ ಶ್ರೀ. ರಾಜಹಂಸ ಅವರು ರಾಜ್ಯಪಾಲರಿಗೆ ಸನಾತನದ ಗ್ರಂಥಗಳನ್ನು ಉಡುಗೊರೆಯಾಗಿ ನೀಡಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”