ಬಂಗಾಳದ ಮುಖ್ಯಮಂತ್ರಿ ಶುಭೆಂದು ಅಧಿಕಾರಿಯವರಿಂದ ಪೊಲೀಸರಿಗೆ ಆದೇಶ

ಕೊಲಕಾತಾ (ಬಂಗಾಳ) – ಬಂಗಾಳದಲ್ಲಿನ ಭಾಜಪ ಸರಕಾರದ ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ಶುಭೆಂದು ಅಧಿಕಾರಿಯವರು ಆಡಳಿತಾತ್ಮಕ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟವಾಗಿ, ಯಾವುದೇ ಧಾರ್ಮಿಕ ಸ್ಥಳದ ಮೇಲಿನ ಧ್ವನಿವರ್ಧಕದ ಶಬ್ದವು ನಿಗದಿತ ಶಬ್ದಮಿತಿಯ ಹೊರಗೆ ಹೋಗಬಾರದು. ಈ ನಿಯಮದ ಜಾರಿಗೆ ಯಾವುದೇ ಒತ್ತಾಯ ಅಥವಾ ಬಲವಂತ ಮಾಡದೆ ಮಾತುಕತೆ ಮತ್ತು ತಿಳಿಹೇಳುವ ಮಾರ್ಗವನ್ನು ಅಳವಡಿಸಿಕೊಳ್ಳಲು ಹೇಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯವನ್ನು ಗೌರವಿಸುವುದು ಅವಶ್ಯಕವಾಗಿದೆ; ಆದರೆ ಅದೇ ಸಮಯದಲ್ಲಿ ಸಾಮಾನ್ಯ ಜನರ ಅನುಕೂಲತೆ ಮತ್ತು ಶಾಂತಿಯೂ ಅಷ್ಟೇ ಮುಖ್ಯವಾಗಿದೆ. ಆದ್ದರಿಂದ ಧ್ವನಿವರ್ಧಕಗಳ ಶಬ್ದವು ಸಂಬಂಧಪಟ್ಟ ಧಾರ್ಮಿಕ ಆವರಣದ ಹೊರಗೆ ಅತಿಯಾದ ಮಟ್ಟದಲ್ಲಿ ತಲುಪದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಹಬ್ಬಗಳಿಗಾಗಿ ಪ್ರತ್ಯೇಕ ವ್ಯವಸ್ಥೆ !
ದುರ್ಗಾಪೂಜೆ, ಈದ್ ಅಥವಾ ಇತರ ಸಮುದಾಯಗಳ ದೊಡ್ಡ ಹಬ್ಬಗಳ ಸಮಯದಲ್ಲಿ ವಿಶೇಷ ಪರಿಸ್ಥಿತಿ ಇರುತ್ತದೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು. ಅಂತಹ ಸಮಯದಲ್ಲಿ ಆ ಹಬ್ಬಗಳನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲಾಗುವುದು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ