ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಮುನ್ನಾ ಕುಮಾರ್ ಶರ್ಮಾ ಅವರ ಒತ್ತಾಯ !
ಆಗ್ರಾದಲ್ಲಿ ಅಖಂಡ ಹಿಂದೂ ರಾಷ್ಟ್ರ ಸಮ್ಮೇಳನದ ಭವ್ಯ ಆಯೋಜನೆ !

ಆಗ್ರಾ (ಉತ್ತರ ಪ್ರದೇಶ) – ಭಾರತವನ್ನು ಸಾಂವಿಧಾನಿಕವಾಗಿ ‘ಹಿಂದೂ ರಾಷ್ಟ್ರ’ ಎಂದು ಘೋಷಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಮುನ್ನಾ ಕುಮಾರ್ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ಆಗ್ರಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಅಖಂಡ ಹಿಂದೂ ರಾಷ್ಟ್ರ ಸಮ್ಮೇಳನ’ದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಇದರೊಂದಿಗೆ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದು, ಗೋಹತ್ಯೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ನಿಷೇಧಿಸುವುದು, ಜನಸಂಖ್ಯಾ ನಿಯಂತ್ರಣ ಕಾಯ್ದೆ ಜಾರಿಗೆ ತರುವುದು, ದೇವಸ್ಥಾನ ಸ್ವಾಧೀನ ಕಾಯ್ದೆಯನ್ನು ರದ್ದುಪಡಿಸುವುದು ಮುಂತಾದ ಬೇಡಿಕೆಗಳನ್ನೂ ಅವರು ಮುಂದಿಟ್ಟರು. ಶ್ರೀ. ಶರ್ಮಾ ಅವರು ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ಮಾಡುವವರನ್ನು ಶಿಕ್ಷಿಸಲು ಕಠಿಣ ಕಾನೂನು ರೂಪಿಸಬೇಕು, ಹಾಗೆಯೇ ದೇಶದ ಹಿಂದೂ ಸಂತರು, ಗೋರಕ್ಷಕರು ಮತ್ತು ಹಿಂದುತ್ವವಾದಿ ಸಂಘಟನೆಗಳ ಪ್ರತಿನಿಧಿಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶರ್ಮಾ ಅವರು, ಅಖಿಲ ಭಾರತ ಹಿಂದೂ ಮಹಾಸಭಾವು ಭಾರತವನ್ನು ‘ಹಿಂದೂ ರಾಷ್ಟ್ರ’ವನ್ನಾಗಿ ಮಾಡಲು ಬದ್ಧವಾಗಿದೆ ಮತ್ತು ಇದೇ ಉದ್ದೇಶದಿಂದ ದೇಶಾದ್ಯಂತ ಹಿಂದೂ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ. ರಾಜಕಾರಣದ ಹಿಂದೂಕರಣ ಮತ್ತು ಹಿಂದೂಗಳ ಸೈನಿಕೀಕರಣ ಇಂದಿನ ಕಾಲದ ಅಗತ್ಯವಾಗಿದೆ. ನಾವು ಭಾರತವನ್ನು ಮತ್ತೆ ವಿಶ್ವಗುರುವನ್ನಾಗಿ ಮಾಡಬೇಕಿದೆ ಎಂದು ಹೇಳಿದರು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath