
ನವದೆಹಲಿ – ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಹೆಚ್ಚಳವಾಗಿದೆ. ಪ್ರತಿ 18 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿರುವುದು ಅತ್ಯಂತ ಭೀಕರ ವಾಸ್ತವವನ್ನು ದೇಶದ ಮುಂದೆ ತಂದಿಟ್ಟಿದೆ.
ಭಾರತದಲ್ಲಿ ಪ್ರತಿ ವರ್ಷ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಂದಾಜು 4 ಲಕ್ಷದ 45 ಸಾವಿರದ 256 ಪ್ರಕರಣಗಳು ದಾಖಲಾಗುತ್ತಿವೆ. ಇದರರ್ಥ ದೇಶದಲ್ಲಿ ಪ್ರತಿ ಗಂಟೆಗೆ ಮಹಿಳೆಯರ ವಿರುದ್ಧ ಅಂದಾಜು 51 ಅಪರಾಧಗಳು ನಡೆಯುತ್ತಿವೆ. ಇನ್ನು ಅತ್ಯಾಚಾರ ಪ್ರಕರಣಗಳ ಬಗ್ಗೆ ಹೇಳುವುದಾದರೆ, ಪ್ರತಿ 18 ನಿಮಿಷಕ್ಕೆ ಒಬ್ಬ ಮಹಿಳೆ ಈ ಕ್ರೌರ್ಯಕ್ಕೆ ಬಲಿಯಾಗುತ್ತಿದ್ದಾಳೆ. ಅಂದರೆ ದಿನಕ್ಕೆ ಸರಾಸರಿ 127 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ.
ಮಹಾರಾಷ್ಟ್ರಕ್ಕೆ ಎರಡನೇ ಸ್ಥಾನ!
ಮಹಿಳೆಯರ ವಿರುದ್ಧದ ಒಟ್ಟು ಅಪರಾಧಗಳ ಸಂಖ್ಯೆಯಲ್ಲಿ ಉತ್ತರ ಪ್ರದೇಶ (65 ಸಾವಿರದ 743 ಅಪರಾಧಗಳು) ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ (45 ಸಾವಿರದ 331 ಅಪರಾಧಗಳು) ಎರಡನೇ ಸ್ಥಾನದಲ್ಲಿದೆ ಮತ್ತು ರಾಜಸ್ಥಾನ (45 ಸಾವಿರದ 58 ಅಪರಾಧಗಳು) ಮೂರನೇ ಸ್ಥಾನದಲ್ಲಿದೆ.
ಅಪರಾಧ ಸಾಬೀತಾಗುವ ಪ್ರಮಾಣ ತೀರಾ ಕಡಿಮೆ!
ನ್ಯಾಯಾಲಯದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಇನ್ನೂ ತೃಪ್ತಿಕರವಾಗಿಲ್ಲ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅಥವಾ ಸುದೀರ್ಘ ಕಾನೂನು ಪ್ರಕ್ರಿಯೆಯಿಂದಾಗಿ ಅನೇಕ ಅಪರಾಧಿಗಳು ಸುಲಭವಾಗಿ ಪಾರಾಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಗಳ ಮೂಲಕ ಮಹಿಳೆಯರನ್ನು ಗುರಿ ಮಾಡುವ ಪ್ರಕರಣಗಳೂ ವೇಗವಾಗಿ ಹೆಚ್ಚುತ್ತಿವೆ. ಈ ಆಘಾತಕಾರಿ ಅಂಕಿ-ಅಂಶಗಳು ಮಹಿಳಾ ಸುರಕ್ಷತೆಗಾಗಿ ಇರುವ ಕಾನೂನುಗಳ ಜಾರಿ ಮತ್ತು ಪೊಲೀಸರ ದಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!