ಆರೋಪಿಗಳ ಬಂಧನ

ನವದೆಹಲಿ – ದೆಹಲಿಯಲ್ಲಿ ಒಂದು ಚಲಿಸುವ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕನು ಓರ್ವ ಮಹಿಳೆಯ ಮೇಲೆ ೨ ಗಂಟೆಗಳ ಕಾಲ ಅತ್ಯಾಚಾರ ನಡೆಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು, ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತ ಮಹಿಳೆ ಪೀತಂಪುರದ ನಿವಾಸಿಯಾಗಿದ್ದು, ಮಂಗೋಲಪುರಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ೨ ಮಕ್ಕಳಿದ್ದಾರೆ. ಸಂತ್ರಸ್ತ ಮಹಿಳೆಯು ತನ್ನ ದೂರಿನಲ್ಲಿ, ೧೧ ಮೇ ರಂದು ತಡರಾತ್ರಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ, ರಾಣಿ ಬಾಗ್‌ನ ಸರಸ್ವತಿ ವಿಹಾರ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನು ಅವಳಿಗೆ ಸಮಯ ಕೇಳುವ ನೆಪದಲ್ಲಿ ತನ್ನನ್ನು ಬಸ್ಸಿನೊಳಗೆ ಎಳೆದೊಯ್ದರು ಎಂದು ಹೇಳಿದ್ದಾಳೆ. ಅವಳ ಮೇಲೆ ಅತ್ಯಾಚಾರ ಎಸಗಿ ನಂತರ ಹೊರಗೆ ತಳ್ಳಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಚಾಲಕ ಉಮೇಶ್ ಮತ್ತು ನಿರ್ವಾಹಕ ರಾಮೇಂದ್ರ ಎಂಬುವವರನ್ನು ಬಂಧಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!