
ನವ ದೆಹಲಿ – ಔಷಧ ಮಾರಾಟಗಾರರು ಮೇ ೨೦ ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ದಿನದಂದು ದೇಶದಲ್ಲಿ ಬಹುತೇಕ ಔಷಧ ಅಂಗಡಿಗಳು (ಮೆಡಿಕಲ್ ಸ್ಟೋರ್ಸ್) ಮುಚ್ಚಲಿವೆ. ಆನ್‌ಲೈನ್ ಔಷಧ ಮಾರಾಟ ಮತ್ತು ದೊಡ್ಡ ಸಂಸ್ಥೆಗಳ ನೀತಿಗಳ ವಿರುದ್ಧ ‘ಆಲ್ ಇಂಡಿಯಾ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್’ ಈ ಮುಷ್ಕರಕ್ಕೆ ಕರೆ ನೀಡಿದೆ.
ಸಂಘಟನೆಯ ಹೇಳಿಕೆಯ ಪ್ರಕಾರ, ‘ಇ-ಫಾರ್ಮಸಿ’ಯ ಕಾರ್ಯವೈಖರಿ ಬಗ್ಗೆ ಮತ್ತು ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಮೂಲಕ ಲಭ್ಯವಾಗುವ ಔಷಧಗಳ ಮಾರಾಟದ ಮೇಲೆ ನಿಯಂತ್ರಣ ಹೇರುವ ಭದ್ರತಾ ಕ್ರಮಗಳ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯುವುದೇ, ಈ ಮುಷ್ಕರದ ಹಿಂದಿನ ಮುಖ್ಯ ಉದ್ದೇಶವಾಗಿದೆ. ಈ ಎಲ್ಲಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿತ್ತು; ಆದರೆ ಔಷಧ ವ್ಯಾಪಾರ ಮತ್ತು ರೋಗಿಗಳ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಈ ವಿಷಯಗಳ ಬಗ್ಗೆ ಕೇಂದ್ರ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ