
ಪ್ರಯಾಗ್‌ರಾಜ್ (ಉತ್ತರ ಪ್ರದೇಶ) – ಸನಾತನ ಧರ್ಮಕ್ಕೆ ಸೇರಲು ಬಯಸಿದ್ದ ಮುಸ್ಲಿಂ ಪ್ರಾಧ್ಯಾಪಕರೊಬ್ಬರ ಅರ್ಜಿಯನ್ನು ತಿರಸ್ಕರಿಸಿದ ಪ್ರಯಾಗ್‌ರಾಜ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ಅವರ ಕ್ರಮಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅನಿಲ್ ಪಂಡಿತ್ (ಹಿಂದಿನ ಮೊಹಮ್ಮದ್ ಅಹ್ಸಾನ್) ಅವರು ಸ್ವಇಚ್ಛೆಯಿಂದ ಸನಾತನ ಧರ್ಮವನ್ನು ಸ್ವೀಕರಿಸಿದ್ದರು ಮತ್ತು ‘ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021’ ರ ಅಡಿಯಲ್ಲಿ ಇದಕ್ಕೆ ಔಪಚಾರಿಕ ಮಾನ್ಯತೆ ಪಡೆಯಲು ಅರ್ಜಿ ಸಲ್ಲಿಸಿದ್ದರು; ಆದರೆ, ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟರು ಅರ್ಜಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಪದೇ ಪದೇ ಪೊಲೀಸ್ ವಿಚಾರಣೆ ನಡೆಸಿದರು ಮತ್ತು ನಂತರ ಅವರ ಅರ್ಜಿಯನ್ನು ತಿರಸ್ಕರಿಸಿದರು. ವಿಚಾರಣೆಯ ಸಮಯದಲ್ಲಿ, ಈ ಯುವಕನ ವಿರುದ್ಧ ಆತನ ಮಾವ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ ಎಂಬ ವಿಷಯವೂ ನ್ಯಾಯಾಲಯದ ಮುಂದೆ ಬಂದಿದೆ. ಸದ್ಯ ಹೈಕೋರ್ಟ್ ನ್ಯಾಯಮೂರ್ತಿಗಳಾದ ಅಜಿತ ಕುಮಾರ್ ಮತ್ತು ಇಂದ್ರಜಿತ್ ಶುಕ್ಲಾ ಅವರ ಪೀಠವು ಪ್ರಯಾಗ್‌ರಾಜ್ ಎಡಿಎಂ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
೧. ಮೊಹಮ್ಮದ್ ಅಹ್ಸಾನ್ ಅವರು 2022 ರಲ್ಲಿ ಆರ್ಯ ಸಮಾಜದ ಮಂದಿರದಲ್ಲಿ ಸನಾತನ ಧರ್ಮವನ್ನು ಸ್ವೀಕರಿಸಿದ್ದರು ಮತ್ತು ಅವರ ಹೆಸರನ್ನು ‘ಅನಿಲ್ ಪಂಡಿತ್’ ಎಂದು ಬದಲಾಯಿಸಿಕೊಂಡಿದ್ದರು. ಶಾಲಾ ದಿನಗಳಿಂದಲೂ ತಮಗೆ ಸನಾತನ ಧರ್ಮ, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಒಲವಿತ್ತು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಅವರ ಕುಟುಂಬದಲ್ಲಿ ನಮಾಜ್ ಮಾಡುವ ಸಂಪ್ರದಾಯ ಎಂದೂ ಇರಲಿಲ್ಲ ಎಂದೂ ಅವರು ಹೇಳಿದ್ದಾರೆ.
೨. ಅಲಹಾಬಾದ್ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಪಿಎಚ್.ಡಿ ಮಾಡುತ್ತಿದ್ದಾಗ ಅವರಿಗೆ ಅಪರ್ಣಾ ವಾಜಪೇಯಿ ಅವರ ಪರಿಚಯವಾಗಿ, ನಂತರ ಇಬ್ಬರೂ ಪ್ರೇಮ ವಿವಾಹವಾದರು. ತಾವು ಸ್ವಇಚ್ಛೆಯಿಂದ ಹಿಂದೂ ಸಂಪ್ರದಾಯದಂತೆ ಅನಿಲ ಪಂಡಿತ್ ಅವರನ್ನು ವಿವಾಹವಾಗಿದ್ದಾಗಿ ಅಪರ್ಣಾ ವಾಜಪೇಯಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ ಅವರ ತಂದೆ ಈ ಮದುವೆಯನ್ನು ವಿರೋಧಿಸಿದ್ದರು. ಪ್ರಸ್ತುತ ಅಪರ್ಣಾ ಅವರು 7 ತಿಂಗಳ ಗರ್ಭಿಣಿಯಾಗಿದ್ದಾರೆ.
೩. ಅಪರ್ಣಾ ಅವರ ತಂದೆ ಅನಿಲ್ ವಿರುದ್ಧ ದೂರು ದಾಖಲಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ಮೇಲೆ ಮತಾಂತರಕ್ಕಾಗಿ ಯಾವುದೇ ಒತ್ತಡ ಹೇರಲಾಗಿಲ್ಲ ಅಥವಾ ಯಾವುದೇ ಅನುಚಿತ ಮಾರ್ಗದಿಂದ ಪ್ರಭಾವ ಬೀರಿ ಸನಾತನ ಧರ್ಮವನ್ನು ಸ್ವೀಕರಿಸುವಂತೆ ಮಾಡಲಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ