ಸಿ.ಎನ್.ಜಿ. ಪ್ರತಿ ಕೆಜಿಗೆ 2 ರೂಪಾಯಿ ದುಬಾರಿ!
(ಸಿ.ಎನ್.ಜಿ. ಎಂದರೆ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ – ಸಂಕುಚಿತ ನೈಸರ್ಗಿಕ ಅನಿಲ)

ನವದೆಹಲಿ – ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಮನವಿ ಮಾಡಿದ ಕೆಲವು ದಿನಗಳ ನಂತರವೇ, ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ತಲಾ 3 ರೂಪಾಯಿಗಳಷ್ಟು ದುಬಾರಿಯಾಗಿದೆ. ಹೊಸ ದರಗಳು ಮೇ 15 ರಿಂದ ಜಾರಿಗೆ ಬಂದಿವೆ. ಅಂದಾಜು 2 ವರ್ಷಗಳ ನಂತರ ದರಗಳಲ್ಲಿ ಈ ಏರಿಕೆ ಮಾಡಲಾಗಿದೆ. ಈಗ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 97.77 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.67 ರೂ.ಗೆ ಲಭ್ಯವಾಗಲಿದೆ. ಇದೇ ವೇಳೆ ಸಿ.ಎನ್.ಜಿ. ಅನಿಲದ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳಿಂದಾಗಿ ಈ ಏರಿಕೆ ಮಾಡಲಾಗಿದೆ. ಇರಾನ್ ಮತ್ತು ಅಮೇರಿಕಾ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ (159 ಲೀಟರ್ ಪೀಪಾಯಿ) 70 ಡಾಲರ್ ಇತ್ತು, ಅದು ಈಗ ಹೆಚ್ಚಾಗಿ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ದಾಟಿದೆ.
ತೈಲ ಕಂಪನಿಗಳಿಗೆ ಪ್ರತಿ ತಿಂಗಳು 30 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿತ್ತು!
ಸರಕಾರದ ಪ್ರಕಾರ, ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರಕಾರಿ ಕಂಪನಿಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ನಷ್ಟದಲ್ಲಿ ಸಾಗುತ್ತಿದ್ದವು. ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರ ಪ್ರಕಾರ, ಪೆಟ್ರೋಲ್, ಡೀಸೆಲ್ ಮತ್ತು ಎಲ್.ಪಿ.ಜಿ ಮಾರಾಟದಲ್ಲಿ ಕಂಪನಿಗಳು ಪ್ರತಿ ತಿಂಗಳು ಅಂದಾಜು 30 ಸಾವಿರ ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸುತ್ತಿವೆ, ಎಂದು ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!