ಮುಜಫ್ಫರನಗರ (ಉತ್ತರ ಪ್ರದೇಶ) ಇಲ್ಲಿ ‘ಲವ್ ಜಿಹಾದ್’ನ ಹೊಸ ಪ್ರಕರಣ ಬೆಳಕಿಗೆ
ಪೊಲೀಸರೊಂದಿಗೆ ನಡೆದ ಘರ್ಷಣೆಯ ನಂತರ ಬಂಧನ !

ಮುಜಫ್ಫರನಗರ (ಉತ್ತರ ಪ್ರದೇಶ) – ಇಲ್ಲಿನ ಶಾರುಖ್ ಎಂಬ ಮುಸಲ್ಮಾನ ಯುವಕನು ತನ್ನ ಹೆಸರನ್ನು ಮೋನು ಎಂದು ಹೇಳಿಕೊಂಡು ಅಪ್ರಾಪ್ತ ಹಿಂದೂ ಹುಡುಗಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದ ಪ್ರಕರಣ ಬೆಳಕಿಗೆ ಬಂದಿದೆ.
೧. ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಶಾರುಖ್ ತನ್ನ ಹೆಸರನ್ನು ಮೋನು ಎಂದು ಹೇಳಿಕೊಂಡು ಅಪ್ರಾಪ್ತ ಹಿಂದೂ ಹುಡುಗಿಯೊಂದಿಗೆ ಸಂಪರ್ಕ ಸಾಧಿಸಿದ್ದನು. ಮೆಲ್ಲನೆ ಆ ಹುಡುಗಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿದನು. ಮೇ ೧೨ ರಂದು ಈತನು ಸಂತ್ರಸ್ತ ಹುಡುಗಿಯನ್ನು ಅಪಹರಿಸಿದ್ದನು. ಈ ಬಗ್ಗೆ ಆಕೆಯ ಕುಟುಂಬದವರು ನಯಿ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
೨. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಕೇವಲ ೨ ಗಂಟೆಗಳಲ್ಲಿ ಅಪ್ರಾಪ್ತ ಹುಡುಗಿಯನ್ನು ಸುರಕ್ಷಿತವಾಗಿ ರಕ್ಷಿಸಿದರು. ಪೊಲೀಸ್ ತಂಡವು ಆರೋಪಿಯನ್ನು ಸುತ್ತುವರಿಯಲು ಯತ್ನಿಸಿದಾಗ, ಆತನು ಪೊಲೀಸರ ಮೇಲೆ ಗುಂಡು ಹಾರಿಸಿದನು. ಪ್ರತಿಯಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಆರೋಪಿಯ ಕಾಲಿಗೆ ಗುಂಡು ತಗುಲಿ ಆತನು ಗಾಯಗೊಂಡನು. ನಂತರ ಆತನನ್ನು ಬಂಧಿಸಲಾಯಿತು.
೩. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ. ಸಂತ್ರಸ್ತ ಹುಡುಗಿಯ ಕುಟುಂಬದವರು ಈ ಪ್ರಕರಣದಲ್ಲಿ ಮತಾಂತರದ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!