ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾದವರು!

ಚೆನ್ನೈ (ತಮಿಳುನಾಡು) – ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿದ ಆರೋಪದ ಮೇಲೆ 25 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಚುನಾವಣೆಯ ವೇಳೆ ನಕಲಿ ದಾಖಲೆಗಳನ್ನು ಬಳಸಿ ಮತದಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
1. ಚೆನ್ನೈ, ಮಧುರೈ ಮತ್ತು ಇತರ ವಿಮಾನ ನಿಲ್ದಾಣಗಳ ಮೂಲಕ ಭಾರತ ಬಿಟ್ಟು ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸ್ ಮತ್ತು ‘ಇಮಿಗ್ರೇಷನ್’ (ವಲಸೆ) ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಇವರನ್ನು ಬಂಧಿಸಲಾಯಿತು. ಈ ವಿದೇಶಿ ಪ್ರಜೆಗಳ ಬೆರಳುಗಳ ಮೇಲೆ ಮತದಾನದ ನಂತರ ಹಾಕಲಾಗುವ ಷಾಯಿ ಕಂಡುಬಂದಿದೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.
2. ತನಿಖಾ ಸಂಸ್ಥೆಗಳ ಪ್ರಕಾರ, ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾದ ನಾಗರಿಕರಾಗಿದ್ದಾರೆ, ಇನ್ನು ಕೆಲವರು ಬ್ರಿಟನ್ ಮತ್ತು ಕೆನಡಾ ಪಾಸ್‌ಪೋರ್ಟ್ ಹೊಂದಿದ್ದಾರೆ.
3. ಪೊಲೀಸರ ಮಾಹಿತಿಯ ಪ್ರಕಾರ, ಅನೇಕ ಶಂಕಿತರು ಚುನಾವಣೆ ಘೋಷಣೆಯಾದ ತಕ್ಷಣ ತಮಿಳುನಾಡಿಗೆ ಬಂದಿದ್ದರು ಮತ್ತು ಮತದಾನದ ನಂತರ ಬೆರಳಿನ ಷಾಯಿ ಅಳಿಸಿಹೋಗಲಿ ಎಂಬ ಕಾರಣಕ್ಕೆ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡಿದ್ದರು.
4. ಅನೇಕ ವಿದೇಶಿ ಪ್ರಜೆಗಳು ಇನ್ನೂ ಭಾರತದಲ್ಲಿರುವ ಸಾಧ್ಯತೆಯಿದೆ ಮತ್ತು ಮತದಾನಕ್ಕೂ ಮೊದಲು ಭಾರತಕ್ಕೆ ಬಂದು ಇನ್ನೂ ಮರಳದವರ ಮಾಹಿತಿಯನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಈ ಸಂಪೂರ್ಣ ಪ್ರಕರಣದ ವಿವರವಾದ ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.
5. ಇಂತಹ ಪ್ರಕರಣಗಳು ಈ ಹಿಂದೆಯೂ ವರದಿಯಾಗಿವೆ. 2025 ರಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಸುಮಾರು 100 ವಿದೇಶಿ ಪ್ರಜೆಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಚುನಾವಣಾ ಆಯೋಗಕ್ಕೆ ವಿನಂತಿಸಿದ್ದರು.
6. ತನಿಖೆಯ ವೇಳೆ ವಿದೇಶಿ ಪ್ರಜೆಗಳು ಮತದಾರರ ಗುರುತಿನ ಚೀಟಿ ಹೊಂದಿದ್ದು, ತಪ್ಪು ವಿಳಾಸದ ಆಧಾರದ ಮೇಲೆ ಮತದಾನದ ಹಕ್ಕನ್ನು ಪಡೆದಿರುವುದು ಕಂಡುಬಂದಿದೆ. ಈ ವರ್ಷವೂ ಸುಮಾರು 60 ವಿದೇಶಿ ಪ್ರಜೆಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.
7. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಬೇರೆ ಯಾವುದೇ ದೇಶದ ಪೌರತ್ವವನ್ನು ಸ್ವೀಕರಿಸದ ವಿದೇಶಿ ಮತದಾರರು ಮಾತ್ರ ಮತ ಚಲಾಯಿಸಬಹುದು. ಅನಿವಾಸಿ ಭಾರತೀಯ (NRI) ಮತದಾರರಾಗಿ ನೋಂದಾಯಿಸಿಕೊಳ್ಳಲು ಭಾರತೀಯ ಪೌರತ್ವವನ್ನು ಉಳಿಸಿಕೊಳ್ಳುವುದು ಮತ್ತು ಮತದಾನದ ಸಮಯದಲ್ಲಿ ಭಾರತೀಯ ಪಾಸ್‌ಪೋರ್ಟ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ