ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಹೈಡ್ರೋಜನ್ ಬಸ್ ಸಂಚಾರ! – Hydrogen Bus in Delhi

ನವ ದೆಹಲಿ – ರಾಜಧಾನಿ ದೆಹಲಿಯಲ್ಲಿ ಮೊದಲ ಬಾರಿಗೆ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ಹೈಡ್ರೋಜನ್ ಅನಿಲದಿಂದ ಚಲಿಸುವ ಬಸ್ ಸೇವೆ ಪ್ರಾರಂಭವಾಗಿದೆ. ‘ಇಂಡಿಯನ್ ಆಯಿಲ್ ಕಾರ್ಪೊರೇಷನ್’ ದೆಹಲಿ ಮೆಟ್ರೋಗೆ ಇಂತಹ ೨ ಅತ್ಯಾಧುನಿಕ ಬಸ್‌ಗಳನ್ನು ಹಸ್ತಾಂತರಿಸಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸ್ವಚ್ಛ, ಸುಸ್ಥಿರ ಮತ್ತು ಆಧುನಿಕ ನಗರ ಸಾರಿಗೆಗೆ ಉತ್ತೇಜನ ನೀಡುವುದು ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ. ಈ ಸೇವೆಯಿಂದ ಸರಕಾರಿ ಅಧಿಕಾರಿಗಳು ಮತ್ತು ಸಾಮಾನ್ಯ ಜನರಿಗೆ ಸಾರ್ವಜನಿಕ ಸಾರಿಗೆಯನ್ನು ಬಳಸಲು ಪ್ರೋತ್ಸಾಹ ಸಿಗುತ್ತದೆ.