12 ದೇವಸ್ಥಾನಗಳ ಪೈಕಿ 7 ಹನುಮಂತನ ದೇವಸ್ಥಾನಗಳು
ಪಾಲಿಕೆಯಲ್ಲಿ ಅಧಿಕಾರದಲ್ಲಿರುವ ಭಾಜಪ (BJP) ವಿರುದ್ಧ ಸ್ಥಳೀಯ ಹಿಂದೂಗಳ ಆಕ್ರೋಶ!

ರಾಜಕೋಟ್ (ಗುಜರಾತ್) – ಇಲ್ಲಿ ಮೇ 14ರ ಮಧ್ಯರಾತ್ರಿ ಮಹಾನಗರ ಪಾಲಿಕೆಯು ಅನಧಿಕೃತ ಎಂದು ಹೇಳಿ ಏಕಕಾಲದಲ್ಲಿ 12 ದೇವಸ್ಥಾನಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದೆ. ಇವುಗಳಲ್ಲಿ 7 ಹನುಮಂತನ ದೇವಸ್ಥಾನಗಳಾಗಿವೆ. ಇದರ ವಿರುದ್ಧ ಭಾರಿ ಸಂಖ್ಯೆಯಲ್ಲಿ ಹಿಂದೂಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಸ್ಥಳೀಯ ಜನರೊಂದಿಗಿನ ಸಂಘರ್ಷವನ್ನು ತಪ್ಪಿಸಲು ರಾಜಕೋಟ್ ಮಹಾನಗರ ಪಾಲಿಕೆಯು ರಸ್ತೆಬದಿಯ ಸಣ್ಣ ದೇವಸ್ಥಾನಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ರಾತ್ರಿ 1:30 ಕ್ಕೆ ಪ್ರಾರಂಭಿಸಿತ್ತು. ಅತಿಕ್ರಮಣ ತೆರವುಗೊಳಿಸುವ ಈ ಕಾರ್ಯಾಚರಣೆಯು ಮುಂಜಾನೆ 5 ಗಂಟೆಯವರೆಗೆ ನಡೆಯಿತು. ಅಧಿಕಾರಿಗಳು ಅಗ್ನಿಶಾಮಕ ದಳ, ಜಾಗೃತ ದಳ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಈ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಅಧಿಕಾರದಲ್ಲಿರುವ ಭಾಜಪ ವಿರುದ್ಧ ಸ್ಥಳೀಯ ಜನರು ತೀವ್ರ ಪದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಳವೀಯ ನಗರ ಪೊಲೀಸ್ ಠಾಣೆಯ ಸಮೀಪವಿರುವ ಹನುಮಂತನ ದೇವಸ್ಥಾನಕ್ಕೂ ತೆರವು ನೋಟಿಸ್ ನೀಡಲಾಗಿತ್ತು; ಆದರೆ ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ ಹೊರಗೆ ಜಮಾಯಿಸಿದರು. ದೇವಸ್ಥಾನದ ಹೊರಗೆ ಸತತ 4 ಗಂಟೆಗಳ ಕಾಲ ಧರಣಿ ನಡೆಸಿದ ನಂತರ, ಇಲಾಖೆಯ ಅಧಿಕಾರಿಗಳು ಸ್ಥಳೀಯ ಜನರಿಗೆ ದೇವಸ್ಥಾನದ ರಸ್ತೆಗೆ ಬರುವ ಒಂದು ಸಣ್ಣ ಭಾಗವನ್ನು ಮಾತ್ರ ತೆರವುಗೊಳಿಸುವುದಾಗಿ ಭರವಸೆ ನೀಡಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !