ಸೈನ್ಯದಳ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಪಾಕಿಸ್ತಾನಕ್ಕೆ ಎಚ್ಚರಿಕೆ

ನವದೆಹಲಿ – ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ನಿಲ್ಲಿಸದಿದ್ದರೆ, ತಾನು ಭೂಪಟದ ಭಾಗವಾಗಿ ಉಳಿಯಬೇಕೇ ಅಥವಾ ಇತಿಹಾಸದ ಪುಟ ಸೇರಬೇಕೇ ಎಂಬುದನ್ನು ಆದೆ ನಿರ್ಧರಿಸಬೇಕಾಗುತ್ತದೆ ಎಂದು ಭಾರತದ ಭೂಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಮಾಣೆಕ್‌ಶಾ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ‘ಆಪರೇಷನ್ ಸಿಂದೂರ್’ನ ಒಂದು ವರ್ಷದ ನೆನಪಿನ ಮಿಲಿಟರಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಜನರಲ್ ದ್ವಿವೇದಿ ಅವರು ಈ ಎಚ್ಚರಿಕೆಯನ್ನು ನೀಡಿದರು.
⚠️ “Geography or History?” – Army Chief General Upendra Dwivedi’s Blunt Warning to Pakistan 🇮🇳
In a stern message to Islamabad, Army Chief said that if Pakistan continues sheltering terrorists and operating against India, it must decide “whether it wants to remain part of… pic.twitter.com/tHe66iZAcu
— Sanatan Prabhat (@SanatanPrabhat) May 16, 2026
ಜನರಲ್ ದ್ವಿವೇದಿ ಅವರು,
೧. ಪಾಕಿಸ್ತಾನವು ತನ್ನ ಕಾರ್ಯತಂತ್ರವನ್ನು ಬದಲಾಯಿಸಿಕೊಳ್ಳದಿದ್ದರೆ, ಮುಂಬರುವ ದಿನಗಳಲ್ಲಿ ಭಾರತೀಯ ಸೇನೆಯು ‘ಆಪರೇಷನ್ ಸಿಂದೂರ್’ಗಿಂತಲೂ ಹಲವು ಪಟ್ಟು ಹೆಚ್ಚು ಕಠಿಣ ಮತ್ತು ಅತ್ಯಂತ ವೇಗದ ಪ್ರತ್ಯುತ್ತರವನ್ನು ನೀಡಲಿದೆ.
೨. ಪಾಕಿಸ್ತಾನವು ಶಾಂತಿ ಮತ್ತು ಅಭಿವೃದ್ಧಿಯ ಹಾದಿಯನ್ನು ಆರಿಸಿಕೊಳ್ಳಬೇಕೇ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುತ್ತಲೇ ಇರಬೇಕೇ ಎಂಬುದನ್ನು ಸ್ವತಃ ನಿರ್ಧರಿಸಬೇಕು. ಭಾರತವು ಯಾವಾಗಲೂ ಶಾಂತಿಯನ್ನೇ ಬಯಸುತ್ತದೆ; ಆದರೆ ಪಾಕಿಸ್ತಾನವು ಭಯೋತ್ಪಾದನೆಯನ್ನು ಹರಡುವುದನ್ನು ಮುಂದುವರಿಸಿದರೆ, ಭಾರತವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂದೆಮುಂದೆ ನೋಡುವುದಿಲ್ಲ.
೩. ಇಂತಹ ಪರಿಸ್ಥಿತಿ ಮತ್ತೊಮ್ಮೆ ನಿರ್ಮಾಣವಾದರೆ, ಸೇನೆಯು ಇನ್ನಷ್ಟು ವೇಗವಾಗಿ ಮತ್ತು ಹೆಚ್ಚು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಲಿದೆ. ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯಲ್ಲಿ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳ ನಡುವಿನ ಅತ್ಯುತ್ತಮ ಸಮನ್ವಯದ ಪ್ರದರ್ಶನವಾಗಿತ್ತು. ದೇಶದಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ. ಯಾವುದೇ ರೀತಿಯ ಸವಾಲನ್ನು ಎದುರಿಸಲು ಭಾರತೀಯ ಸೇನೆಯು ಸಂಪೂರ್ಣವಾಗಿ ಸನ್ನದ್ಧವಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ