ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆ !

ಕಲ್ಯಾಣ (ಠಾಣೆ ಜಿಲ್ಲೆ) – ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಭದ್ರತಾ ಪಡೆಯ (ಆರ್.ಪಿ.ಎಫ್.) ಹಿಂದೂ ಯೋಧನ ಮೇಲೆ ಮೂವರು ಮುಸಲ್ಮಾನರು ಆಕ್ರಮಣ ಮಾಡಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಯಾಣ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾದರ್-ಗೊರಖಪುರ ಎಕ್ಸಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೆಲವರು ಥಳಿಸುತ್ತಿದ್ದಾರೆಂಬ ಮಾಹಿತಿ ರೈಲ್ವೆ ಭದ್ರತಾ ಪಡೆಯ ಯೋಧ ನರೇಂದ್ರ ಯಾದವ ಅವರಿಗೆ ಲಭಿಸಿತ್ತು. ಅವರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಆ ಮೂವರನ್ನು ರೈಲಿನಿಂದ ಕೆಳಗಿಳಿಸಿ ವಿಚಾರಣೆಗಾಗಿ ಪ್ಲಾಟ್ ಫಾರ್ಮ್ ಗೆ ಕರೆತಂದರು. ಈ ಸಮಯದಲ್ಲಿ ಆ ಮೂವರು ಯಾದವ್ ಅವರ ಮೇಲೆ ಹಠಾತ್ತನೆ ದಾಳಿ ಮಾಡಿದರು. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಶೇಖ್, ಸಲ್ಮಾನ್ ಶೇಖ್ ಮತ್ತು ಸರಕಾರ ಶೇಖ್ ಎಂದು ಗುರುತಿಸಲಾಗಿದೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರನ್ನು ಆಧಾರವಾಡಿ ಜೈಲಿಗೆ ಕಳುಹಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!