
ಆಸನಸೋಲ್ (ಬಂಗಾಳ) – ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರು ರಾಜ್ಯದ ಪ್ರಾರ್ಥನಾ ಮಂದಿರಗಳ ಮೇಲಿನ ಧ್ವನಿವರ್ಧಕಗಳ ಧ್ವನಿಯನ್ನು ಮಿತಿಯಲ್ಲಿಡುವಂತೆ ಆದೇಶ ನೀಡಿದ ನಂತರ, ಸ್ಥಳೀಯ ಪೊಲೀಸರು ಆ ಬಗ್ಗೆ ತಪಾಸಣೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಮತಾಂಧ ಮುಸಲ್ಮಾನರು ವಿರೋಧಿಸಿದರು ಮತ್ತು ಜಹಾಂಗೀರ್ ಮೊಹಲ್ಲಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ‘ಅಲ್ಲಾಹೂ ಅಕ್ಬರ್’ (ಅಲ್ಲಾಹನು ಶ್ರೇಷ್ಠನು) ಮತ್ತು ‘ನಾರಾ-ಎ-ತಕ್ಬೀರ್’(ಅಲ್ಲಾ ಎಲ್ಲರಿಗಿಂತ ದೊಡ್ಡವನು) ಎಂಬ ಘೋಷಣೆಗಳನ್ನು ಕೂಗುತ್ತಾ ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿದರು, ಹಾಗೂ ಕಲ್ಲು ತೂರಾಟ ನಡೆಸಿದರು. ಇದನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದರು. ಈ ಘಟನೆಯು ರೇಲಪಾರದಲ್ಲಿ ನಡೆದಿದೆ. ಘಟನೆಯ ನಂತರ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ, ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಕೆಲವು ಮುಸಲ್ಮಾನರನ್ನು ಬಂಧಿಸಿದ್ದಾರೆ. ಶಾಂತಿ ಕಾಪಾಡಲು ಮತ್ತು ವದಂತಿಗಳು ಹರಡದಂತೆ ತಡೆಯಲು ತಾತ್ಕಾಲಿಕವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
1. ಪೊಲೀಸ್ ಆಡಳಿತವು ರಾಜ್ಯ ಸರಕಾರದ ನಿರ್ದೇಶನದಂತೆ ಆಸನಸೋಲ್ ನ ಹಲವು ಪ್ರದೇಶಗಳಲ್ಲಿನ ಪ್ರಾರ್ಥನಾ ಮಂದಿರಗಳ ಮೈಕುಗಳ ಧ್ವನಿ ಕಡಿಮೆ ಇಡುವಂತೆ ತಿಳಿಸಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಗಲಿನ ವೇಳೆಯಲ್ಲಿ ರೇಲಪಾರ್ ಪ್ರದೇಶದಲ್ಲಿ ಪೊಲೀಸರು ಮತ್ತು ಸ್ಥಳೀಯ ಮುಸಲ್ಮಾನರ ನಡುವೆ ಚರ್ಚೆ ನಡೆದಿತ್ತು. ಸಂಜೆಯ ವೇಳೆ ಭಾರಿ ಸಂಖ್ಯೆಯಲ್ಲಿ ಮುಸಲ್ಮಾನರು ಪೊಲೀಸ್ ಠಾಣೆಗೆ ತಲುಪಿದರು. ಘೋಷಣೆಗಳನ್ನು ಕೂಗುತ್ತಾ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸ್ ಮತ್ತು ಸಾರ್ವಜನಿಕರ ವಾಹನಗಳನ್ನು ಧ್ವಂಸಗೊಳಿಸಿದರು. ಈ ಘಟನೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ.
2. ಈ ಘಟನೆಯ ನಂತರ ಪ್ರದೇಶದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಪೊಲೀಸ್ ಉಪ ಆಯುಕ್ತರಾದ ವಿ.ಜಿ.ಸತೀಶ್ ಪಸುಮಾರ್ತಿ ಅವರು ಈ ಬಗ್ಗೆ ಮಾತನಾಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಸಮಸ್ಯೆಯಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!