8 ಜನರಿಗೆ ಗಾಯ
ಪರಾರಿಯಾಗುವಾಗ ಆರೋಪಿಯಿಂದ ಚಾಕುವಿನಿಂದ ದಾಳಿ

ಮೊಡೆನಾ (ಇಟಲಿ) – ಇಲ್ಲಿ ಕಾರೊಂದರಿಂದ ಜನಸಂದಣಿಗೆ ಡಿಕ್ಕಿ ಹೊಡೆಸಲಾಗಿದ್ದು, ಕನಿಷ್ಠ 8 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ ನಂತರ ಆರೋಪಿಯು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಆತ ವ್ಯಕ್ತಿಯೊಬ್ಬನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಇದರ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ 30 ವರ್ಷದ ಯುವಕನಾಗಿದ್ದು, ಉತ್ತರ ಆಫ್ರಿಕಾ ಮೂಲದವನೆಂದು ಹೇಳಲಾಗುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಉದ್ದೇಶಪೂರ್ವಕವಾಗಿ ನಡೆಸಲಾದ ದಾಳಿಯಂತೆ ಕಂಡುಬರುತ್ತಿದೆ ಎಂದು ಮೊಡೆನಾದ ಮೇಯರ್ ತಿಳಿಸಿದ್ದಾರೆ.
Quanto accaduto oggi a Modena, dove un uomo ha investito diversi pedoni e poi avrebbe accoltellato un passante, è gravissimo.
Esprimo la mia vicinanza alle persone ferite e alle loro famiglie. Rivolgo anche un ringraziamento ai cittadini che con coraggio sono intervenuti per…— Giorgia Meloni (@GiorgiaMeloni) May 16, 2026
ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಈ ಘಟನೆಯನ್ನು ಅತ್ಯಂತ ಗಂಭೀರವಾದುದು ಎಂದು ಕರೆದಿದ್ದು, ಗಾಯಾಳುಗಳು ಮತ್ತು ಅವರ ಕುಟುಂಬಸ್ಥರಿಗೆ ಸಂತಾಪ ಹಾಗೂ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!