ಕುಸಿಯುತ್ತಿರುವ ಜನಸಂಖ್ಯೆ; ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಘೋಷಣೆ

ಶ್ರೀಕಾಕುಳಂ (ಆಂಧ್ರಪ್ರದೇಶ) – ತೆಲುಗು ರಾಜ್ಯಕ್ಕೆ ಈಗ ಜನಸಂಖ್ಯೆ ಕಡಿಮೆಯಾಗುತ್ತಿರುವ ಆತಂಕ ಕಾಡಲಾರಂಭಿಸಿದೆ. ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸಲು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೂರನೇ ಮಗುವಿಗೆ ಜನ್ಮ ನೀಡುವ ದಂಪತಿಗೆ ೧೦ ಸಾವಿರ ರೂಪಾಯಿ, ಹಾಗೂ ನಾಲ್ಕನೇ ಮಗುವಿಗೆ ಜನ್ಮ ನೀಡುವ ದಂಪತಿಗೆ ೪೦ ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ‘ಸ್ವರ್ಣ ಆಂಧ್ರ-ಸ್ವಚ್ಛ ಆಂಧ್ರ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ಘೋಷಣೆ ಮಾಡಿದರು. ಎರಡನೇ ಮಗು ಜನಿಸಿದಾಗ ೨೫ ಸಾವಿರ ರೂಪಾಯಿ ನೀಡುವುದಾಗಿ ಅವರು ಈ ಹಿಂದೆಯೇ ವಿಧಾನಸಭೆಯಲ್ಲಿ ಘೋಷಿಸಿದ್ದರು.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾತನಾಡುತ್ತಾ, “ಜನಸಂಖ್ಯೆಯೇ ಭವಿಷ್ಯದ ನಿಜವಾದ ಸಂಪತ್ತು. ಈ ಪ್ರೋತ್ಸಾಹವು ಹೊಸ ಜನಸಂಖ್ಯಾ ನಿರ್ವಹಣಾ ನೀತಿಯ ಒಂದು ಭಾಗವಾಗಿದೆ. ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವುದೇ ಈ ನೀತಿಯ ಉದ್ದೇಶವಾಗಿದೆ; ಏಕೆಂದರೆ ರಾಜ್ಯದ ಅಭಿವೃದ್ಧಿಯು ಕೇವಲ ಮಾನವ ಸಂಪನ್ಮೂಲದಿಂದ ಮಾತ್ರ ಸಾಧ್ಯ” ಎಂದು ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!