ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿದರೆ ೧೫ ವರ್ಷಗಳ ಜೈಲು ಶಿಕ್ಷೆ

ಕ್ಯಾನ್ಬೆರಾ (ಆಸ್ಟ್ರೇಲಿಯಾ) – ಪಂಜಾಬಿ ಸಮುದಾಯ ಸೇರಿದಂತೆ ಭಾರತೀಯರ ವಿರುದ್ಧ ಜನಾಂಗೀಯ ನಿಂದನೆ ಮಾಡುತ್ತಿದ್ದ ಮತ್ತು ಮೆರವಣಿಗೆ ನಡೆಸಿ ಬೆದರಿಕೆ ಹಾಕುತ್ತಿದ್ದ ‘ನಿಯೋ-ನಾಜಿ’ ಸಂಘಟನೆಯನ್ನು ಆಸ್ಟ್ರೇಲಿಯಾ ಸರಕಾರವು ಶಾಶ್ವತವಾಗಿ ನಿಷೇಧಿಸಿದೆ. ಗೃಹ ಸಚಿವ ಟೋನಿ ಬರ್ಕ್ ಈ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಈ ಸಂಘಟನೆಯಲ್ಲಿ ಪಾಲ್ಗೊಳ್ಳುವ, ಪ್ರಚಾರ ಮಾಡುವ ಅಥವಾ ಅದರ ಚಟುವಟಿಕೆಗಳಲ್ಲಿ ಭಾಗವಹಿಸುವ ಯಾವುದೇ ವ್ಯಕ್ತಿಗೆ ೧೫ ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು.
ಈ ಸಂಘಟನೆಯು ಕಳೆದ ಕೆಲವು ವರ್ಷಗಳಿಂದ ಅಡಾಲ್ಫ್ ಹಿಟ್ಲರ್ ನ ನಾಜಿ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿತ್ತು ಮತ್ತು ದೇಶದಲ್ಲಿ ವಾಸಿಸುವ ಕಪ್ಪು ವರ್ಣೀಯ ವಲಸಿಗರನ್ನು ಗುರಿಯಾಗಿಸಿಕೊಂಡಿತ್ತು. ವಿಶೇಷವಾಗಿ: ಮೆಲ್ಬೋರ್ನ್ ಮತ್ತು ಸಿಡ್ನಿಯಂತಹ ಪ್ರಮುಖ ನಗರಗಳಲ್ಲಿ ಈ ಗುಂಪಿನ ನಾಯಕ ಥಾಮಸ್ ಸೆವೆಲ್ ವಲಸಿಗರ ವಿರುದ್ಧ ಹಲವಾರು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದನು. ಈ ಗುಂಪು ನಿರಂತರವಾಗಿ ಆಸ್ಟ್ರೇಲಿಯಾದ ಸಮಾಜವನ್ನು ವಿಭಜಿಸಲು ಮತ್ತು ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸುತ್ತಿತ್ತು.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border