
ನವ ದೆಹಲಿ – ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡಿನ ಹಿಂದೂ ದೇವಸ್ಥಾನಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಆಡಳಿತವನ್ನು ನಿಯಂತ್ರಿಸುವ ಕಾಯ್ದೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಮರು ಪ್ರಾರಂಭಿಸಿದೆ. ಸರ್ವೋಚ್ಚ ನ್ಯಾಯಾಲಯವು ಏಪ್ರಿಲ್ 2025 ರ ತನ್ನ ಹಳೆಯ ಆದೇಶವನ್ನು ರದ್ದುಗೊಳಿಸಿದೆ. ಆ ಆದೇಶದಲ್ಲಿ ಅರ್ಜಿದಾರರಿಗೆ ಸಂಬಂಧಪಟ್ಟ ಉಚ್ಚ ನ್ಯಾಯಾಲಯಗಳನ್ನು ಸಂಪರ್ಕಿಸಲು ನಿರ್ದೇಶನ ನೀಡಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರು ಪರಿಶೀಲನಾ ಅರ್ಜಿಗಳ ಬಗ್ಗೆ ನ್ಯಾಯಾಲಯ ಈ ನಿರ್ಧಾರ ಪ್ರಕಟಿಸಿದೆ.
1. 2012 ರಿಂದ ಬಾಕಿ ಉಳಿದಿರುವ ಈ ಮುಖ್ಯ ಅರ್ಜಿಗಳಲ್ಲಿ ತಮಿಳುನಾಡು (ವರ್ಷ 1959), ಪುದುಚೇರಿ (ವರ್ಷ 1972), ಆಂಧ್ರಪ್ರದೇಶ (ವರ್ಷ 1987) ಮತ್ತು ತೆಲಂಗಾಣ (ಅಂದಿನ ಆಂಧ್ರಪ್ರದೇಶ) (ವರ್ಷ 1987) ರಾಜ್ಯಗಳ ‘ಹಿಂದೂ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ’ (ಹಿಂದೂ ರಿಲಿಜಿಯಸ್ ಆಂಡ್ ಚಾರಿಟೇಬಲ್ ಎಂಡೋಮೆಂಟ್ಸ್) ಕಾಯ್ದೆಗಳ ನಿಬಂಧನೆಗಳನ್ನು ಪ್ರಶ್ನಿಸಲಾಗಿದೆ.
2. ಏಪ್ರಿಲ್ 2025 ರಲ್ಲಿ ಸರ್ವೋಚ್ಚ ನ್ಯಾಯಾಲಯವು, ಪ್ರತಿಯೊಂದು ರಾಜ್ಯದ ಕಾಯ್ದೆಗಳು ಭಿನ್ನವಾಗಿರಬಹುದು. ಆದ್ದರಿಂದ ಉಚ್ಚ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಕಾಯ್ದೆಗಳನ್ನು ಪರಿಶೀಲಿಸುವುದು ಹೆಚ್ಚು ಸೂಕ್ತ ಎಂದು ಹೇಳಿತ್ತು; ಆದರೆ ಮರು ಪರಿಶೀಲನಾ ಅರ್ಜಿಯಲ್ಲಿ ಅರ್ಜಿದಾರರು ಈ ಕೆಳಗಿನಂತೆ ವಾದ ಮಂಡಿಸಿದರು:
ಅ. ಈ ಎಲ್ಲಾ ಕಾಯ್ದೆಗಳು ಒಂದೇ ಮಾದರಿಯಾಗಿದ್ದು, ಹಳೆಯ ‘ಮದ್ರಾಸ್ ಹಿಂದೂ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳ’ ಕಾಯ್ದೆಯಲ್ಲಿ ಇವುಗಳ ಮೂಲವಿದೆ.
ಆ. ಈ ಪ್ರಕರಣವು ಸರ್ವೋಚ್ಚ ನ್ಯಾಯಾಲಯದಲ್ಲಿ ಕಳೆದ 13 ವರ್ಷಗಳಿಂದ ಬಾಕಿ ಉಳಿದಿದೆ. ಇಂತಹ ಸಂದರ್ಭದಲ್ಲಿ ಪ್ರಕರಣವನ್ನು ಮತ್ತೆ ಉಚ್ಚ ನ್ಯಾಯಾಲಯಕ್ಕೆ ಕಳುಹಿಸುವುದು ಅರ್ಜಿದಾರರಿಗೆ ಮಾಡುವ ಅನ್ಯಾಯ ಮತ್ತು ಸಮಯದ ವ್ಯರ್ಥವಾಗುತ್ತದೆ.
ಇ. ಸಂವಿಧಾನದ ವಿಧಿ 32 ರ ಪ್ರಕಾರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯವನ್ನು ಸಂಪರ್ಕಿಸುವುದು ಸ್ವತಃ ಒಂದು ಮೂಲಭೂತ ಹಕ್ಕಾಗಿದೆ. ಈಗ ಸರ್ವೋಚ್ಚ ನ್ಯಾಯಾಲಯವು ಈ ರಾಜ್ಯಗಳಲ್ಲಿನ ದೇವಸ್ಥಾನಗಳ ಮೇಲಿನ ಸರಕಾರದ ನಿಯಂತ್ರಣದ ಸಿಂಧುತ್ವದ ಕುರಿತು ಅಂತಿಮ ತೀರ್ಪು ನೀಡಲಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !