ಸಮಾಜ ಘಾತುಕರಿಂದ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಪುಣೆ – ಕೊಂಡ್ವಾದಲ್ಲಿ ಇಬ್ಬರು ಮಕ್ಕಳ ನಡುವೆ ಆಟಿಕೆಯ ವಿಷಯವಾಗಿ ಸಣ್ಣ ಜಗಳ ನಡೆದಿತ್ತು. ಈ ಸಣ್ಣ ಘಟನೆಯನ್ನು ಬಳಸಿಕೊಂಡು ಅಶಾಂತಿ ಹರಡುವ ಕೆಲ ಶಕ್ತಿಗಳು ಎರಡು ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಪ್ರಯತ್ನಿಸಿದವು. ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲು ಕೆಲವು ಸಮಾಜ ಘಾತುಕರು ಕೊಂಡ್ವಾ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಮೊಕದ್ದಮೆಗಳನ್ನು (FIR) ದಾಖಲಿಸಲಾಗಿದೆ. ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!