ನವಿ ಮುಂಬಯಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ನಡೆದ ಘಟನೆ

ನವಿ ಮುಂಬಯಿ, ಮೇ ೨೦ (ವಾರ್ತೆ.) – ನವಿ ಮುಂಬಯಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) ಇಬ್ಬರು ಅಧಿಕಾರಿಗಳು ೧ ಲಕ್ಷದ ೪೦ ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಉಪಕಾರ್ಯದರ್ಶಿ ಡಾ. ದೀಪಕ್ ಆವಟೆ ಮತ್ತು ಸ್ವಚ್ಛತಾ ಅಧಿಕಾರಿ ಸಮೀರ್ ಮ್ಹಾತ್ರೆ ಬಂಧಿತ ಆರೋಪಿಗಳು. ಮಾರುಕಟ್ಟೆ ಸಮಿತಿಯಲ್ಲಿ ಕಳೆದ ಹಲವು ವರ್ಷಗಳಿಂದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಗುತ್ತಿಗೆದಾರರೊಬ್ಬರು ಈ ಕುರಿತು ದೂರು ನೀಡಿದ್ದರು. ಗುತ್ತಿಗೆದಾರರ ೧ ವರ್ಷದ ಕೆಲಸದ ಬಾಕಿ ಬಿಲ್ ಮೊತ್ತ ೯ ಲಕ್ಷದ ೭೮ ಸಾವಿರ ರೂಪಾಯಿ ಆಗಿತ್ತು. ಈ ಮೊತ್ತದ ಮೇಲೆ ಶೇಕಡಾ ೧೫ ರಷ್ಟು ಅಂದರೆ ೧ ಲಕ್ಷದ ೪೬ ಸಾವಿರ ರೂಪಾಯಿ ಲಂಚ ನೀಡುವಂತೆ ಆರೋಪಿಗಳು ಬೇಡಿಕೆಯಿಟ್ಟಿದ್ದರು. ಅದರಂತೆ ಮಾತುಕತೆಯ ಕೊನೆಯಲ್ಲಿ ೧ ಲಕ್ಷದ ೪೦ ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!