ಬೆಂಗಳೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮನವಿ

ಬೆಂಗಳೂರು – ಮೇ ೨೧ : ಬರುವ ಮೇ 28, 2026 ರಂದು ನಡೆಯಲಿರುವ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ರಮ ಗೋಸಾಗಾಟ, ಕಾನೂನು ಬಾಹಿರ ಗೋಹತ್ಯೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ರಸ್ತೆಗಳನ್ನು ಬಂದ್ ಮಾಡಿ ನಮಾಜ್ ಮಾಡುವುದನ್ನು ತಡೆಯುವ ಕುರಿತು ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರು ಹಾಗೂ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಸುಂದ್ರೇಶ್ ನರ್ಗಲ್, ಶ್ರೀ .ನವೀನ್, ಹಿಂದೂ ಮುಖಂಡ ಶ್ರೀ.ಎಂ.ಎಲ್. ಶಿವಕುಮಾರ, ಗೋರಕ್ಷಕ್ ಶ್ರೀ.ಸಂತೋಷ ಕಡ್ತಾಳ, ಶ್ರೀರಾಮ ಸೇನಾ ಮಹಿಳಾ ಮುಖಂಡೆ ಸೌ. ಸರಸ್ವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ.ಮೋಹನ ಗೌಡ ಅವರು ಮಾತನಾಡಿ, ಬಕ್ರಿದ್ ಹಬ್ಬದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋವು, ಎಮ್ಮೆ ಹಾಗೂ ಕರುಗಳ ಸಾಗಾಟ ನಡೆಯುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾವಹಿಸುವ ಅಗತ್ಯವಿದೆ ಎಂದು ತಿಳಿಸಿದರು. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಗೋಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದರೂ ಸಹ, ಕೆಲವು ಕಡೆಗಳಲ್ಲಿ ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಸ್ಥಳಗಳಲ್ಲಿ ಕಾನೂನು ಬಾಹಿರ ಗೋಹತ್ಯೆ ನಡೆಯುತ್ತಿರುವ ಬಗ್ಗೆ ಹಿಂದಿನ ವರ್ಷಗಳಲ್ಲಿ ದೂರುಗಳು ಹಾಗೂ ವರದಿಗಳು ಬಂದಿವೆ. ಇಂತಹ ಕೃತ್ಯಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದರ ಜೊತೆಗೆ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೂ ನೋವು ಉಂಟಾಗುತ್ತದೆ ಎಂದು ಹೇಳಿದರು. ಅದಲ್ಲದೇ ಗೋರಕ್ಷಣೆ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರ ಮೇಲೆ ಸುಳ್ಳು ಅಟ್ರಾಸಿಟಿ ಪ್ರಕರಣಗಳನ್ನು ದಾಖಲಿಸುವ ಘಟನೆಗಳೂ ನಡೆಯುತ್ತಿದ್ದು, ಇವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಬಕ್ರಿದ್ ಹಬ್ಬದ ಸಮಯದಲ್ಲಿ ಬೆಂಗಳೂರು ನಗರದ ಶಿವಾಜೀನಗರ, ಕೆ.ಆರ್. ಮಾರ್ಕೆಟ್, ಹೆಬ್ಬಾಳ, ನಾಗಾವರ, ಜೆ.ಪಿ. ನಗರ, ಥಣಿಸಂದ್ರ, ಫ್ರೇಸರ್ ಟೌನ್, ಬಾನಸವಾಡಿ, ಎಚ್‌ಬಿಆರ್ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳನ್ನು ಬಂದ್ ಮಾಡಿ ನಮಾಜ್ ಮಾಡುವುದರಿಂದ ವಿದ್ಯಾರ್ಥಿಗಳು, ನೌಕರರು, ಸಾರ್ವಜನಿಕರು ಹಾಗೂ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಸಮಿತಿಯ ಪ್ರಮುಖ ಬೇಡಿಕೆಗಳು,
1. ಬಕ್ರಿದ್ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ ಅಕ್ರಮ ಗೋಹತ್ಯೆ ಮತ್ತು ಗೋಸಾಗಾಟವನ್ನು ಸಂಪೂರ್ಣ ತಡೆಯಲು ವಿಶೇಷ ಪೊಲೀಸ್ ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು.
2. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲೆಗಳ ಪ್ರಮುಖ ಪ್ರವೇಶ ದ್ವಾರಗಳಲ್ಲಿ ೨೪ ಗಂಟೆಗಳ ವಿಶೇಷ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು.
3. ಪಶು ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳು, ಪರವಾನಗಿ ಹಾಗೂ ಕಾನೂನುಬದ್ಧ ನಿಯಮಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.
4. ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಶೆಡ್‌ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಗೋಹತ್ಯೆಗೆ ಅವಕಾಶ ನೀಡಬಾರದು.
5. ಅಕ್ರಮ ಗೋಸಾಗಾಟ, ಗೋಹತ್ಯೆ ಹಾಗೂ ಸಂಬಂಧಿತ ಕಾನೂನು ಉಲ್ಲಂಘನೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು.
6. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಆಡಳಿತಕ್ಕೆ ವಿಶೇಷ ಸೂಚನೆ ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಬೇಕು.
7. ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಬೇಕು.
ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ಧಾರ್ಮಿಕ ಭಾವನೆಗಳ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹಿಸಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ