ವಾರಕರಿ ಸಂಪ್ರದಾಯದ ಸಂತರು ಮತ್ತು ಕೀರ್ತನಕಾರರನ್ನು ನುಸುಳುಕೋರರೆಂದು ಕರೆದ ಪ್ರಕರಣ

ಪುಣೆ – ಶರದ್‌ಚಂದ್ರ ಪವಾರ ಬಣದ ವಕ್ತಾರ ವಿಕಾಸ ಲವಾಂಡೆ ಅವರ ವಿರುದ್ಧ ವಾಘೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ, ಹೆಚ್ಚುವರಿ ಸತ್ರ ನ್ಯಾಯಾಲಯವು ಈ ಹಿಂದೆ ಮೇ ೨೦ ರವರೆಗೆ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಿರೀಕ್ಷಣಾ ಜಾಮೀನಿನ ಅರ್ಜಿಯಲ್ಲಿ ತಮ್ಮ ವಿರುದ್ಧ ಈ ಹಿಂದೆ ದಾಖಲಾಗಿದ್ದ ೪ ಅಪರಾಧ ಪ್ರಕರಣಗಳ ಮಾಹಿತಿಯನ್ನು ಲವಾಂಡೆ ಅವರು ಮುಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಸರಕಾರಿ ನ್ಯಾಯವಾದಿ ರಾಜೇಶ ಕಾವೇಡಿಯಾ ಅವರು ನ್ಯಾಯಾಲಯದಲ್ಲಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಲವಾಂಡೆ ಅವರಿಗೆ ನೀಡಲಾಗಿರುವ ರಕ್ಷಣೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯವು ಈ ವಾದವನ್ನು ಪುರಸ್ಕರಿಸಿ ಅವರ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿತು. ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಪೊಲೀಸರು ತಕ್ಷಣವೇ ಲವಾಂಡೆ ಅವರನ್ನು ಬಂಧಿಸಿದರು.
೧. ವಾರಕರಿ ಸಂಪ್ರದಾಯದಲ್ಲಿ ತಥಾಕಥಿತ ನುಸುಳುವಿಕೆ ನಡೆಯುತ್ತಿದೆ ಎಂದು ಆರೋಪಿಸಿ ವಿಕಾಸ ಲವಾಂಡೆ ಅವರು ೨೦ ಜನರ ಪಟ್ಟಿಯೊಂದನ್ನು ಪ್ರಕಟಿಸಿದ್ದರು. ಇದಕ್ಕೆ ವಾರಕರಿ ಸಂಪ್ರದಾಯದ ಸಂತರು ಮತ್ತು ಕೀರ್ತನಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅಲ್ಲಲ್ಲಿ ದೂರುಗಳನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಹಲವು ಕೀರ್ತನಕಾರರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ‘ರಾಷ್ಟ್ರೀಯ ವಾರಕರಿ ಸೇನೆ’ ಕೂಡ ಈ ಪ್ರಕರಣದಲ್ಲಿ ಲವಾಂಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಲವಾಂಡೆ ವಿರುದ್ಧ ವಾಘೋಲಿ ಮತ್ತು ಪಂಢರಪುರದಲ್ಲಿ ಪ್ರಕರಣಗಳು ದಾಖಲಾಗಿದ್ದವು.
೨. ವಾಘೋಲಿಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಕಾಸ ಲವಾಂಡೆ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯವು ತನಿಖಾಧಿಕಾರಿ, ಸರಕಾರಿ ಪಕ್ಷ ಮತ್ತು ವಾಘೋಲಿ ಪೊಲೀಸರಿಗೆ ಈ ಕುರಿತು ತಮ್ಮ ನಿಲುವನ್ನು ಮಂಡಿಸುವಂತೆ ನಿರ್ದೇಶನ ನೀಡಿತ್ತು. ಇದಾದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಲವಾಂಡೆ ಅವರು ತಮ್ಮ ವಿರುದ್ಧ ಈ ಹಿಂದೆ ದಾಖಲಾಗಿದ್ದ ಅಪರಾಧ ಪ್ರಕರಣಗಳನ್ನು ಮರೆಮಾಚಿರುವುದು ಪತ್ತೆಯಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”