
ಟೆಗುಸಿಗಾಲ್ಪಾ (ಹೊಂಡುರಾಸ್) – ಮಧ್ಯ ಅಮೆರಿಕದ ಹೊಂಡುರಾಸ್ ದೇಶದಲ್ಲಿ ಇತ್ತೀಚೆಗೆ ನಡೆದ ೨ ಪ್ರತ್ಯೇಕ ಗುಂಡಿನ ದಾಳಿಯ ಘಟನೆಗಳಲ್ಲಿ ಇದುವರೆಗೆ ಕನಿಷ್ಠ ೨೫ ಜನರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ ೬ ಜನ ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ.
೧. ಮೊದಲ ದಾಳಿಯು ಟ್ರುಜಿಲ್ಲೊ ಪ್ರದೇಶದ ಹೊಲವೊಂದರಲ್ಲಿ ನಡೆದಿದೆ. ಈ ದಾಳಿಯಲ್ಲಿ ಬಂದೂಕುಧಾರಿಗಳು ಕೆಲಸಗಾರರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ೧೯ ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಪರಿಸರ ಮತ್ತು ಭೂಮಿಯ ಹಕ್ಕಿಗಾಗಿ ಧ್ವನಿ ಎತ್ತುವವರಿಗೆ ಈ ಹಿಂದೆಯೂ ಬೆದರಿಕೆಗಳು ಬರುತ್ತಿದ್ದವು.
೨. ಎರಡನೇ ಘಟನೆಯು ಗ್ವಾಟೆಮಾಲಾ ಗಡಿಯ ಸಮೀಪವಿರುವ ಒಮೊವಾ ಪ್ರದೇಶದಲ್ಲಿ ನಡೆದಿದೆ. ಇಲ್ಲಿ ಬಂದೂಕುಧಾರಿ ಅಪರಾಧಿಗಳು ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಹಿರಿಯ ಅಧಿಕಾರಿ ಸೇರಿದಂತೆ ೬ ಜನ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation