
ಮುಂಬಯಿ – ಇಲ್ಲಿನ ಹೆಸರಾಂತ ಶಿಕ್ಷಣ ಸಂಸ್ಥೆಯೊಂದರ ಪದವಿ ಪೂರ್ವ ಕಾಲೇಜಿನ (ಜೂನಿಯರ್ ಕಾಲೇಜ್) ತರಗತಿಗಳಿಗೆ ಮಂಜೂರಾತಿ ನೀಡಲು ಶಿಕ್ಷಣ ಉಪನಿರ್ದೇಶಕರ ಕಚೇರಿಯ ಹಿರಿಯ ಗುಮಾಸ್ತ ರಾಹುಲ್ ಶಿಂದೆ ಎಂಬಾತ ಒಂದೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿರೋಧಕ ದಳವು (ACB) ಆತನನ್ನು ಬಂಧಿಸಿದೆ.
ಎಲ್ಲಾ ನಿಯಮಗಳನ್ನು ಪಾಲಿಸಿದ್ದರೂ ಸಹ, ಹಿರಿಯ ಗುಮಾಸ್ತ ರಾಹುಲ್ ಶಿಂದೆ ತರಗತಿಗಳ ಮಂಜೂರಾತಿಯ ಕಡತವನ್ನು (ಫೈಲ್) ಮುಂದುವರಿಸದೆ ಬಾಕಿ ಉಳಿಸಿಕೊಂಡಿದ್ದನು. ನಿಯಮಾನುಸಾರ ಕೆಲಸ ಆಗಬೇಕಿದ್ದರೂ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ದೂರುದಾರರು ಲಂಚ ನೀಡದೆ ಭ್ರಷ್ಟಾಚಾರ ನಿರೋಧಕ ದಳಕ್ಕೆ ದೂರು ನೀಡಿದ್ದರು. ದೂರು ಬಂದ ತಕ್ಷಣವೇ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದರು. ಶಿಂದೆ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತೆ ಆತನನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲಾಯಿತು. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”