ಜಮ್ಮು-ಕಾಶ್ಮೀರದಲ್ಲಿ ಬಲವಂತದ ಮತಾಂತರ ಮಾಡಲಾಗಿತ್ತು!

ಬಿಜನೌರ್ (ಉತ್ತರ ಪ್ರದೇಶ) – ಜಮ್ಮು-ಕಾಶ್ಮೀರದಲ್ಲಿ ಬಲವಂತವಾಗಿ ಮತಾಂತರಗೊಳಿಸಿ ‘ಹಮ್ಜಾ’ ಎಂದು ಹೆಸರಿಡಲಾಗಿದ್ದ ಬಿಜನೌರ್‌ನ ವಿಶಾಲ್ ಎಂಬ ಅಪ್ರಾಪ್ತ ಹುಡುಗ, ತನ್ನ ಹಳ್ಳಿಗೆ ಮರಳಿದ ನಂತರ ಸನಾತನ ಧರ್ಮಕ್ಕೆ ಮರುಸೇರ್ಪಡೆಗೊಳಿಸಲಾಯಿತು. ಪೊಲೀಸರು ಈ ಹಿಂದೂ ಯುವಕನನ್ನು ಸುರಕ್ಷಿತವಾಗಿ ರಕ್ಷಿಸಿ ಆತನ ಕುಟುಂಬಸ್ಥರಿಗೆ ಒಪ್ಪಿಸಿದ್ದರು. ಆ ಬಳಿಕ ಗ್ರಾಮದ ಶಿವ ದೇವಸ್ಥಾನದಲ್ಲಿ ಈ ಮತಾಂತರಗೊಂಡ ಯುವಕನ ಶುದ್ಧೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರ ಸಮ್ಮುಖದಲ್ಲಿ ವಿಧಿ-ವಿಧಾನಗಳ ಪೂಜೆ ಮತ್ತು ಮಂತ್ರಘೋಷಗಳ ನಡುವೆ ವಿಶಾಲ್‌ನನ್ನು ಮತ್ತೆ ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು.
ವಿಶಾಲ್ ಕೆಲವು ದಿನಗಳ ಹಿಂದೆ ಕಾಶ್ಮೀರಕ್ಕೆ ಹೋಗಿದ್ದನು. ಅಲ್ಲಿನ ಮಸೀದಿಯೊಂದರಲ್ಲಿ ಆತನ ಮತಾಂತರ ಮಾಡಿ, ‘ಹಮ್ಜಾ’ ಎಂದು ಹೆಸರಿಡಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಸಾರವಾದ ನಂತರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಕ್ರಮದ ನಂತರ ವಿಶಾಲ್‌ನನ್ನು ಮರಳಿ ಕರೆತರಲಾಯಿತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ