
ಕೋಲಕಾತಾ (ಬಂಗಾಳ) – ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಝಾಡ್‌ಗ್ರಾಮ್‌ನಲ್ಲಿ ಝಾಲ್ಮುಡಿ (ಒಣ ಭೇಲ್) ಮಾರಾಟ ಮಾಡುವ ವಿಕ್ರಮ್ ಸಾವ್ ಅವರ ಅಂಗಡಿಗೆ ಭೇಟಿ ನೀಡಿ ಝಾಲ್ಮುಡಿ ತಿಂದಿದ್ದರು. ಇದರ ವಿಡಿಯೋ ಅನ್ನು ಪ್ರಧಾನಿ ಮೋದಿ ಸ್ವತಃ ಹಂಚಿಕೊಂಡಿದ್ದರು. ಈ ಘಟನೆಯು ದೇಶ-ವಿದೇಶಗಳಲ್ಲಿ ಸಾಕಷ್ಟು ಜನಪ್ರಿಯವಾಗಿತ್ತು. ಇದೀಗ ವಿಕ್ರಮ್ ಸಾವ್ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅವರ ಅಂಗಡಿಯನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ಬೆದರಿಕೆಗಳು ಬರುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ವಿಕ್ರಮ್ ಸಾವ್ ಅವರು ಮಾತನಾಡಿ, “ದೂರವಾಣಿ (ಫೋನ್) ಮೂಲಕ ಬೆದರಿಕೆ ಹಾಕುವ ಜನರು ಅಶ್ಲೀಲ ಭಾಷೆಯನ್ನು ಬಳಸುತ್ತಾ ನನ್ನ ಅಂಗಡಿಯನ್ನು ಉಡಾಯಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಒಂದು ವಿಡಿಯೋ ಕರೆಯಲ್ಲಿ ಕೆಲವರು ಆಯುಧಗಳನ್ನು ಸಹ ತೋರಿಸುತ್ತಿದ್ದರು. ಇದರಿಂದಾಗಿ ನನ್ನ ಕುಟುಂಬ ತೀವ್ರ ಆತಂಕದಲ್ಲಿದೆ,” ಎಂದು ಅವರು ಹೇಳಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein