ಆಳಂದ ಶಿವಲಿಂಗ ಅಪವಿತ್ರಗೊಳಿಸಿದ ಗಲಭೆಕೋರರ ಮೇಲಿನ ಕೇಸ್ ವಾಪಸ್ ಪಡೆದು ಓಲೈಕೆ ಮಾಡಿದ ರಾಜ್ಯ ಸರಕಾರ !!

ಬೆಂಗಳೂರು – ಕರ್ನಾಟಕ ರಾಜ್ಯ ಸಚಿವ ಸಂಪುಟವು ಇತ್ತೀಚೆಗೆ 56 ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ಇದರಲ್ಲಿ ಮುಖ್ಯವಾಗಿ, 2022ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ರಾಗಚೈತನ್ಯ ಮಹಾಪ್ರಭುಗಳ ಸಮಾಧಿ ಸ್ಥಳದಲ್ಲಿದ್ದ ಶಿವಲಿಂಗಕ್ಕೆ ಮಲಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಹಿಂದೂ ನಾಯಕರು ಸ್ಥಳವನ್ನು ಶುದ್ಧೀಕರಿಸುವಾಗ, ಅಲ್ಲಿನ ಮುಸ್ಲಿಂ ಸಮುದಾಯದವರು ದಂಗೆ ಎದ್ದು ಪೊಲೀಸ್ ಸಿಬ್ಬಂದಿ, ಹಿಂದೂ ನಾಯಕರು ಹಾಗೂ ಕೇಂದ್ರ ಸಚಿವರ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಈ ಪ್ರಕರಣದಲ್ಲಿ ಮುಸ್ಲಿಮರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆಯುವಂತೆ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪತ್ರ ಬರೆದಿದ್ದರು. ಡಿಜಿಪಿ ಹಾಗೂ ಪ್ರಾಸಿಕ್ಯೂಷನ್ ಇಲಾಖೆಯಂತಹ ಕಾನೂನು ಸಂಸ್ಥೆಗಳು ಈ ಪ್ರಕರಣವನ್ನು ವಾಪಸ್ ಪಡೆಯಲು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರವೂ, ರಾಜ್ಯ ಸರಕಾರವು ಮುಸ್ಲಿಮರ ಮೇಲಿನ ಈ ಪ್ರಕರಣವನ್ನು ವಾಪಸ್ ಪಡೆದಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾತನಾಡಿ ಈ ಹಿಂದೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ ಮತ್ತು ಪೊಲೀಸರ ಮೇಲೆ ಆಕ್ರಮಣ ಮಾಡಿದ ಗಂಭೀರ ಪ್ರಕರಣವನ್ನು ಸರಕಾರ ವಾಪಸ್ ಪಡೆದಾಗ, ಉಚ್ಚ ನ್ಯಾಯಾಲಯವು ಸರಕಾರದ ಆ ಆದೇಶವನ್ನು ರದ್ದುಗೊಳಿಸಿತ್ತು. ಅದಕ್ಕೂ ಮುನ್ನ ಕಾಂಗ್ರೆಸ್ ಸರಕಾರವು 176 ಪಿಎಫ್‌ಐ (PFI) ಮತ್ತು ಎಸ್‌ಡಿಪಿಐ (SDPI) ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿತ್ತು. ಪ್ರಸ್ತುತ ರಾಜ್ಯ ಸರಕಾರವು ಸಂಪೂರ್ಣವಾಗಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ. ಗಲಭೆ, ದಂಗೆ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿರುವುದು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿರುವ ಅತ್ಯಂತ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯಬಾರದು.
ರಾಜ್ಯ ಸರಕಾರವು ಡಿಜಿಪಿ, ಐಜಿಪಿ ಮತ್ತು ಪ್ರಾಸಿಕ್ಯೂಷನ್ ಇಲಾಖೆಗಳು ನೀಡಿರುವ ಕಾನೂನಾತ್ಮಕ ಸಲಹೆಗಳನ್ನು ಗೌರವಿಸಬೇಕು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ರಾಜಕೀಯ ಪ್ರಭಾವದಿಂದ ಮುಕ್ತಗೊಳಿಸಬೇಕು. ಇಂತಹ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವುದರಿಂದ ಅಪರಾಧಿಗಳಿಗೆ ಮತ್ತೊಮ್ಮೆ ಕ್ರಿಮಿನಲ್ ಚಟುವಟಿಕೆಗಳನ್ನು ಮಾಡಲು ಸರಕಾರವೇ ಕುಮ್ಮಕ್ಕು ನೀಡಿದಂತಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸರಕಾರವು ತಕ್ಷಣವೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಒತ್ತಾಯಿಸುತ್ತಿದೆ ಎಂದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ