ರಾಜ್ಯದ ಕಾಂಗ್ರೆಸ್ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹಿಜಾಬ್ ಬೆಂಬಲಿಸುತ್ತಾ, ಹಿಂದೂ ವಿದ್ಯಾರ್ಥಿಗಳಿಗೆ ಎಚ್ಚರಿಕೆ
(ಹಿಜಾಬ್ ಎಂದರೆ ಮುಸ್ಲಿಂ ಮಹಿಳೆಯರ ತಲೆ ಮತ್ತು ಕುತ್ತಿಗೆಯನ್ನು ಮುಚ್ಚುವ ವಸ್ತ್ರ)

ಬೆಂಗಳೂರು – ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ‘ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಕೇಸರಿ ಶಾಲು ಧರಿಸಿ ಬರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಂಗಾರಪ್ಪ, ನಮ್ಮದು ಸಮಾನತೆಯ ರಾಜಕಾರಣವಾಗಿದೆ. ಹಿಜಾಬ್ ವಿಷಯದಲ್ಲಿ ಭಾಜಪದ ರಾಜಕೀಯ ನಿಲುವು ಏನೆಂಬುದು ಎಲ್ಲರಿಗೂ ತಿಳಿದಿದೆ; ಆದರೆ ನಮಗೆ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ತರುವುದು ಮುಖ್ಯವಾಗಿದೆ. (ಒಂದು ಧರ್ಮದ ಸಂಪ್ರದಾಯಗಳಿಗೆ ಅನುಮತಿ ನೀಡುವುದು ಮತ್ತು ಇನ್ನೊಂದನ್ನು ನಿರಾಕರಿಸುವುದು ಕಾಂಗ್ರೆಸ್ ಪ್ರಕಾರ ಸಮಾನತೆಯೇ? – ಸಂಪಾದಕರು) ಈ ಕುರಿತು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸ್ಪಷ್ಟವಾಗಿ ಘೋಷಿಸಲಾಗಿತ್ತು. ರಾಜ್ಯದ ಜನತೆ ನಮ್ಮ ಮೇಲಿನ ವಿಶ್ವಾಸದಿಂದ ನಮಗೆ ಬಹುಮತ ನೀಡಿದ್ದಾರೆ. (ಈಗ ಜನರಿಗೆ ಪಶ್ಚಾತ್ತಾಪವಾಗುತ್ತಿದೆ! – ಸಂಪಾದಕರು) ನಾವು ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ಮತದಾರರ ಋಣ ತೀರಿಸುತ್ತಿದ್ದೇವೆ. ಕೇಂದ್ರ ಸರಕಾರದ ಅಧೀನದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ಯಾವ ನಿಯಮಗಳಿವೆ ಎಂಬುದನ್ನು ಭಾಜಪ ತಿಳಿದುಕೊಳ್ಳಲಿ. ಧೈರ್ಯವಿದ್ದರೆ ಮೊದಲು ಅಲ್ಲಿನ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಕಳುಹಿಸಲಿ. ನಮ್ಮ ರಾಜ್ಯದ ಸರಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಯಾವುದೇ ಅನುಮತಿ ಇಲ್ಲ. ನಿಯಮ ಮೀರಿ ಯಾರಾದರೂ ಕೇಸರಿ ಶಾಲು ಧರಿಸಿ ಬಂದರೆ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲಾಗುವುದು, ಎಂದು ಅವರು ಎಚ್ಚರಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ