ವಿಶ್ವ ಆರೋಗ್ಯ ಸಂಸ್ಥೆಯಿಂದ ಒಂದು ವಾರದ ಹಿಂದಷ್ಟೇ ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಘೋಷಣೆ

ನವದೆಹಲಿ – ಕೊರೋನಾ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಜಾಗತಿಕ ಆರೋಗ್ಯ ಸಂಸ್ಥೆಯು ಮೇ 17 ರಂದು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ಯನ್ನು ಘೋಷಿಸಿದೆ. ಆಫ್ರಿಕನ್ ದೇಶಗಳಲ್ಲಿ ‘ಇಬೋಲಾ’ ಸಾಂಕ್ರಾಮಿಕ ರೋಗವು ಅತ್ಯಂತ ವೇಗವಾಗಿ ಹರಡುತ್ತಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಈ ಸಂಕಟವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರಕಾರವೂ ಸಹ ಮುನ್ನೆಚ್ಚರಿಕೆ ನೀಡಿ ಜಾಗರೂಕರಾಗಿರಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಾಂಗೋ ಮತ್ತು ಉಗಾಂಡಾ ಈ ಆಫ್ರಿಕನ್ ದೇಶಗಳಲ್ಲಿ ಇಬೋಲಾ ಸೋಂಕು ವೇಗವಾಗಿ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ‘ಆಫ್ರಿಕಾ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆನ್ಷನ್’ ಸಂಸ್ಥೆಯು ಇಬೋಲಾ ಕುರಿತು ಗಂಭೀರ ಎಚ್ಚರಿಕೆಯನ್ನು ನೀಡಿದೆ.
ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ನಂತಹ ಆಫ್ರಿಕನ್ ದೇಶಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಿ! – ಭಾರತದ ನಾಗರಿಕರಿಗೆ ಕರೆ
ಭಾರತದ ಆರೋಗ್ಯ ಸಚಿವಾಲಯವು ಭಾರತೀಯ ನಾಗರಿಕರಿಗೆ ವಿದೇಶಿ ಪ್ರಯಾಣದ ಕುರಿತು ಸೂಚನೆಗಳನ್ನು ನೀಡುತ್ತಾ, ನೀವು ಬೇರೆ ದೇಶಗಳಿಗೆ ಪ್ರಯಾಣಿಸುತ್ತಿದ್ದರೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ. ನಾಗರಿಕರು ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ನಂತಹ ಆಫ್ರಿಕನ್ ದೇಶಗಳಿಗೆ ಪ್ರಯಾಣಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಆ ದೇಶಗಳಲ್ಲಿ ಪರಿಸ್ಥಿತಿ ತಿಳಿಯಾಗುವವರೆಗೆ ಅಗತ್ಯವಿದ್ದ ಹೊರತು ಅಲ್ಲಿಗೆ ಪ್ರಯಾಣಿಸಬಾರದು. ಪ್ರಸ್ತುತ ಯಾರು ಆ ದೇಶಗಳಲ್ಲಿದ್ದಾರೋ ಅಥವಾ ಅಲ್ಲಿಂದ ಕೆಲವು ಜನರು ಅತ್ಯಗತ್ಯ ಕೆಲಸಗಳಿಗಾಗಿ ಭಾರತಕ್ಕೆ ಬರುತ್ತಿದ್ದಾರೋ, ಅವರು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಎಂದು ಸರ್ಕಾರ ತಿಳಿಸಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!