ಮುಖ್ಯಮಂತ್ರಿ ಜೋಸೆಫ್ ವಿಜಯರವರ ಆದೇಶದ ನಂತರ ಕೇವಲ ೩ ದಿನಗಳಲ್ಲಿ ವ್ಯಾಪಕ ಕಾರ್ಯಾಚರಣೆ
೧ ಕೋಟಿ ೪೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳೂ ಜಪ್ತು !

ಚೆನ್ನೈ (ತಮಿಳುನಾಡು) – ಮಾದಕ ವಸ್ತು ಕಳ್ಳಸಾಗಾಣಿಕೆದಾರರ ವಿರುದ್ಧ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಜೋಸೆಫ್ ವಿಜಯರವರು ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ತಮಿಳುನಾಡು ಪೊಲೀಸರು ಕೇವಲ ೩ ದಿನಗಳಲ್ಲಿ ೩ ಸಾವಿರ ೨೪೬ ಅಪರಾಧಿಗಳು, ಹಾಗೂ ೪೧೯ ಮಾದಕ ವಸ್ತು ಕಳ್ಳಸಾಗಾಣಿಕೆದಾರರನ್ನು ಬಂಧಿಸಿದ್ದಾರೆ. ಈ ವಿಶೇಷ ಅಭಿಯಾನದಲ್ಲಿ ೧೫ ಸಾವಿರ ೩೪೯ ಜನರನ್ನು ತಪಾಸಣೆಗೊಳಪಡಿಸಲಾಗಿತ್ತು. ಇದರಲ್ಲಿ ೧೨ ಸಾವಿರ ೬೫೦ ಕುಖ್ಯಾತ ಅಪರಾಧಿಗಳು ಒಳಗೊಂಡಿದ್ದರು. ಇವರ ಪೈಕಿ ೩ ಸಾವಿರ ೨೪೬ ಜನರನ್ನು ಮುಂದಿನ ವಿಚಾರಣೆಗಾಗಿ ಬಂಧಿಸಲಾಗಿದೆ.
ಮಾದಕ ವಸ್ತು ಕಾಯ್ದೆಯಡಿ ಮಾದಕ ವಸ್ತುಗಳ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರು ೨೯೪ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ೨೬೮ ಕಿಲೋಗ್ರಾಂ ಗಾಂಜಾ ಮತ್ತು ೨ ಸಾವಿರದ ೪೭೬ ಅಮಲು ಮಾತ್ರೆಗಳನ್ನು ಜಪ್ತು ಮಾಡಲಾಗಿದೆ. ಇವುಗಳ ಅಂದಾಜು ಮೌಲ್ಯ ೧ ಕೋಟಿ ೪೩ ಲಕ್ಷ ರೂಪಾಯಿ ಎಂದು ಹೇಳಲಾಗಿದೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ೪೮ ಗಂಟೆಗಳ ಒಳಗಾಗಿ ಜೋಸೆಫ್ ವಿಜಯರವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇದರಲ್ಲಿಯೇ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಸುಮಾರು ೬೫ ಮಾದಕ ವಸ್ತು ವಿರೋಧಿ ಕಾರ್ಯಪಡೆಗಳನ್ನು ಸ್ಥಾಪಿಸುವ ಮಹತ್ವದ ನಿರ್ಧಾರವೂ ಒಳಗೊಂಡಿತ್ತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”