‘ಕಾಕ್ರೋಚ್ ಜನತಾ ಪಾರ್ಟಿ’ ಅಭಿಯಾನದ ವಿರುದ್ಧದ ಅರ್ಜಿಯ ಕುರಿತು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆ !

ನವ ದೆಹಲಿ – ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ, ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು ಸ್ಥಾಪಿಸಿ ನ್ಯಾಯಾಲಯದ ಹೆಸರನ್ನು ಅನಗತ್ಯವಾಗಿ ಕೆಡಿಸಲಾಗುತ್ತಿದೆ ಎಂದು ವಾದಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಲಾಗಿತ್ತು. ಆದರೆ, ನ್ಯಾಯಾಲಯವು ಈ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ. ‘ಈ ವಿಷಯವನ್ನು ಅಷ್ಟೊಂದು ಭಾವನಾತ್ಮಕವಾಗಿ ನೋಡಬೇಡಿ’, ಎಂದು ಮುಖ್ಯ ನ್ಯಾಯಮೂರ್ತಿಗಳು ನ್ಯಾಯವಾದಿಗಳಿಗೆ ಸಲಹೆ ನೀಡಿದರು.
ಮೇ ೧೫ ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನ್ಯಾಯಾಂಗ ವ್ಯವಸ್ಥೆಯ ಮೇಲೆ ಕೆಸರು ಎರಚಾಟ ನಡೆಸುವ ಪ್ರವೃತ್ತಿಗಳ ವಿರುದ್ಧ ಕಠಿಣ ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದರು. ಅವರು, ಸಮಾಜದಲ್ಲಿ ಇಂತಹ ಕೆಲವು ಪರಾವಲಂಬಿಗಳಿದ್ದಾರೆ, ಅವರು ನಿರಂತರವಾಗಿ ವ್ಯವಸ್ಥೆಯ ಮೇಲೆ ದಾಳಿ ನಡೆಸುತ್ತಿರುತ್ತಾರೆ. ನಿಮಗೆ ಅವರದ್ದೇ ಪಂಕ್ತಿಯಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಿದೆಯೇ ? ಕೆಲವು ಯುವಕರು ಕಾಕ್ರೋಚ್ ಗಳಂತೆ (ಜಿರಳೆಗಳಂತೆ) ಇರುತ್ತಾರೆ, ಅವರಿಗೆ ಕಾನೂನು ಕ್ಷೇತ್ರದಲ್ಲಿ ಅಥವಾ ಬೇರೆಲ್ಲೂ ಕೆಲಸ ಸಿಗುವುದಿಲ್ಲ; ನಂತರ ಅಂತಹ ಜನರು ಪತ್ರಿಕೋದ್ಯಮ, ಸಾಮಾಜಿಕ ಜಾಲತಾಣ ಅಥವಾ ಮಾಹಿತಿ ಹಕ್ಕು ಕಾರ್ಯಕರ್ತರಾಗುತ್ತಾರೆ ಮತ್ತು ಎಲ್ಲರ ಮೇಲೆಯೂ ಕೆಸರು ಎರಚಲು ಮಾಡಲು ಪ್ರಾರಂಭಿಸುತ್ತಾರೆ,” ಎಂದು ಹೇಳಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !