ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುವಾಗ ಮಹಿಳಾ ಪೊಲೀಸ್ ಮಹಾನಿರೀಕ್ಷಕರು ನಗುತ್ತಿದ್ದರಿಂದ ಆಕ್ರೋಶ

ಕೊಯಂಬತ್ತೂರು (ತಮಿಳುನಾಡು) – ಇಲ್ಲಿನ ಸೂಲೂರು ಪರಿಸರದಲ್ಲಿ ಓರ್ವ ೧೦ ವರ್ಷದ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರಗೈದು ಆಕೆಯ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮನೆಯ ಹತ್ತಿರ ಕಿರಾಣಿ ಸಾಮಾನು ತರಲು ಹೋಗಿದ್ದ ಬಾಲಕಿಯು ಊರ ಹೊರಗಿನ ಕೆರೆಯ ಬಳಿ ಮೃತಾವಸ್ಥೆಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರತಿಕ್ರಿಯೆ ನೀಡುತ್ತಾ, ಇದು ದುಃಖದ ಘಟನೆಯಾಗಿದೆ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಕೊಯಂಬತ್ತೂರು ಪಶ್ಚಿಮ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ಆರ್.ವಿ. ರಮ್ಯಾ ಭಾರತಿಯವರು ಮಾಹಿತಿ ನೀಡಿದರು. ಇಂತಹ ಗಂಭೀರ ಘಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸುವಾಗ ಈ ಮಹಿಳಾ ಪೊಲೀಸ್ ಅಧಿಕಾರಿಯು ಯಾವುದೋ ಆನಂದೋತ್ಸವದ ಕಾರ್ಯಕ್ರಮಕ್ಕೆ ಬಂದಂತೆ ನಗುತ್ತಾ ಸಮಯ ಕಳೆದರು. ರಮ್ಯಾ ಭಾರತಿಯವರ ಈ ವರ್ತನೆ ಚಿತ್ರೀಕರಣಗೊಂಡು ಪ್ರಸಾರವಾದ ನಂತರ ಇಂತಹ ಅಸಮರ್ಥ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಿ, ಎಂದು ಅಸಮಾಧಾನಗೊಂಡ ಜನರು ಒತ್ತಾಯಿಸಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”