ದೆಹಲಿಯಲ್ಲಿ ಜರುಗಿದ ‘ಕ್ವಾಡ್’ ದೇಶಗಳ ವಿದೇಶಾಂಗ ಸಚಿವರ ಸಭೆ
(ಕ್ವಾಡ್ ದೇಶಗಳೆಂದರೆ ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್. ಈ ೪ ದೇಶಗಳ ಒಕ್ಕೂಟವನ್ನು ಅಮೆರಿಕವು ಪ್ರಮುಖವಾಗಿ ಈ ವಲಯದಲ್ಲಿ ಚೀನಾದ ಪ್ರಾಬಲ್ಯವನ್ನು ಕಡಿಮೆ ಮಾಡಲು ರಚಿಸಿದೆ.)

ನವದೆಹಲಿ – ಇರಾನ್‌ನಿಂದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದು ಇಂಧನ ಭದ್ರತೆಯ ಮೇಲೆ ಸ್ಪಷ್ಟವಾಗಿ ಪರಿಣಾಮ ಬೀರುತ್ತಿದೆ. ಸಮುದ್ರ ಮಾರ್ಗಗಳ ಸ್ವಾತಂತ್ರ್ಯವನ್ನು ಕಾಪಾಡುವುದು ಅಗತ್ಯವಾಗಿದೆ ಮತ್ತು ‘ಕ್ವಾಡ್’ ದೇಶಗಳು ಯಾವುದೇ ರೀತಿಯ ಟೋಲ್ ವಿಧಿಸುವುದನ್ನು ವಿರೋಧಿಸುತ್ತವೆ. ಕ್ವಾಡ್ ಸದಸ್ಯ ದೇಶಗಳು ಕೇವಲ ಚರ್ಚೆಯ ಮೇಲಷ್ಟೇ ಅಲ್ಲದೆ, ಖಚಿತ ನಿರ್ಣಯಗಳತ್ತ ಗಮನ ಹರಿಸುತ್ತಿವೆ ಎಂಬ ವಿಷಯವನ್ನು ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರು ಇಲ್ಲಿ ನಡೆದ ಕ್ವಾಡ್ ದೇಶಗಳ ವಿದೇಶಾಂಗ ಸಚಿವರ ಸಭೆಯ ನಂತರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳ ವಿದೇಶಾಂಗ ಸಚಿವರು ಭಾಗವಹಿಸಿದ್ದರು. ಅಮೆರಿಕದಿಂದ ಮಾರ್ಕೊ ರುಬಿಯೋ, ಜಪಾನ್‌ನಿಂದ ತೋಷಿಮಿತ್ಸು ಮೊತೇಗಿ ಮತ್ತು ಆಸ್ಟ್ರೇಲಿಯಾದಿಂದ ಪೆನ್ನಿ ವಾಂಗ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಭಯೋತ್ಪಾದನೆಯ ವಿಷಯದ ಕುರಿತು ಮಾತನಾಡುತ್ತಾ, ಇದರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕು. ಯಾವ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳು ನಡೆಯುತ್ತವೆಯೋ, ಅವುಗಳಿಗೆ ತಮ್ಮ ರಕ್ಷಣೆಯ ಹಕ್ಕಿದೆ ಎಂದು ಹೇಳಿದರು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು