ಉತ್ತರಾಖಂಡ: ‘ಲವ್ ಜಿಹಾದ್’ನ ಹೊಸ ಪ್ರಕರಣ ಬೆಳಕಿಗೆ !

ಡೆಹರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ತ್ಯುನಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಹೆಸರಿನ ನಕಲಿ ಗುರುತು ಸೃಷ್ಟಿಸಿ, ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅನಾಸ್ ಹೆಸರಿನ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ‘ಅಂಶ ರಾಣಾ’ ಹೆಸರಿನ ‘ಇನ್ ಸ್ಟಾಗ್ರಾಮ್’ ಖಾತೆಯ ಮೂಲಕ ೧೬ ವರ್ಷದ ಹಿಂದೂ ಯುವತಿಯನ್ನು ಪ್ರೇಮದ ಜಾಲಕ್ಕೆ ಸೆಳೆದಿದ್ದನು. ನಂತರ ಹೋಟೆಲ್ ಗೆ ಕರೆದೊಯ್ದು ಆಕೆಯ ಮೇಲೆ ಬಲಾತ್ಕಾರ ಮಾಡಿದನು. ಈ ಪ್ರಕರಣದಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿ ಮಹಮ್ಮದ್ ಜುನೇದ್ ಎಂಬಾತ ಆರೋಪಿಗೆ ಸಹಾಯ ಮಾಡಿದ್ದು, ಯಾವುದೇ ಗುರುತಿನ ಚೀಟಿ ಇಲ್ಲದೆಯೇ ಹೋಟೆಲ್ ನಲ್ಲಿ ಕೋಣೆ ಸಿಗುವಂತೆ ಮಾಡಿಕೊಟ್ಟಿದ್ದನು.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜನರು ಮತ್ತು ರುದ್ರಸೇನಾ ದೇವಭೂಮಿ ಸಂಘಟನೆಯ ಕಾರ್ಯಕರ್ತರಲ್ಲಿ ಆಕ್ರೋಶದ ಅಲೆ ಎಬ್ಬಿದೆ. ಈ ಘಟನೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ತ್ಯುನಿಯ ಮುಖ್ಯ ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದರು. ಸಿಟ್ಟಿಗೆದ್ದ ನಾಗರಿಕರು ರಸ್ತೆಗಿಳಿದು ಘೋಷಣೆಗಳನ್ನು ಕೂಗಿದರು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !