‘ನಾನು ಇಂತಹ ಕೊಳಕು ಧರ್ಮವನ್ನು ನಂಬುವುದಿಲ್ಲ’, ಎಂದು ಸನಾತನ ಧರ್ಮದ ವಿರುದ್ಧ ಟಿಪ್ಪಣಿ ಮಾಡಿದ ಪ್ರಕರಣ

ಕೋಲಕಾತಾ (ಬಂಗಾಳ) – ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸಿಲಿಗುಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅವರು ವರ್ಷ ೨೦25 ರಲ್ಲಿ ಕೋಲಕಾತಾದಲ್ಲಿ ಈದ್ ನಿಮಿತ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮವನ್ನು ‘ಕೊಳಕು ಧರ್ಮ’ ಎಂದು ಕರೆದಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಮುಗಳ ಅಡಿಯಲ್ಲಿ ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.
೧. ಮಮತಾ ಬ್ಯಾನರ್ಜಿ ಅವರ ವಿರುದ್ಧ ದೂರು ದಾಖಲಾದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ೧ ವಿಡಿಯೋ ಪ್ರಸಾರವಾಗುತ್ತಿದೆ. ಇದರಲ್ಲಿ ಅವರು, ‘ಒಂದು ಕೊಳಕು ಧರ್ಮ, ಇದನ್ನು ‘ಜುಮ್ಲಾ (ಸುಳ್ಳು ಭರವಸೆ ನೀಡುವುದು) ಪಾರ್ಟಿ’ಯು ತಯಾರಿಸಿದೆ, ನಾವು ಅದನ್ನು ನಂಬುವುದಿಲ್ಲ’ ಎಂದು ಹೇಳುತ್ತಿದ್ದಾರೆ. (ಹಾಗಾದರೆ ಇಂತಹ ಧರ್ಮದಲ್ಲಿ ಮಮತಾ ಬ್ಯಾನರ್ಜಿ ಏಕೆ ಇದ್ದಾರೆ ? ಅವರು ಇದುವರೆಗೆ ಬೇರೆ ಧರ್ಮವನ್ನು ಏಕೆ ಸ್ವೀಕರಿಸಲಿಲ್ಲ ?, ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ ! – ಸಂಪಾದಕರು)
೨. ನ್ಯಾಯವಾದಿ ರಿಂಕಿ ಚಟರ್ಜಿ ಸಿಂಗ್ ಅವರು ಮಮತಾ ಬ್ಯಾನರ್ಜಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹೇಳಿಕೆಯಿಂದ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಈ ದೂರಿನಲ್ಲಿ ಹೇಳಲಾಗಿದೆ. ತೃಣಮೂಲ ಕಾಂಗ್ರೆಸ್‌ನ ಕೆಲವು ನಾಯಕರು ಈ ಹಿಂದೆಯೂ ಹಿಂದೂ ಧರ್ಮದ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಈ ದೂರಿನಲ್ಲಿ ಆರೋಪಿಸಲಾಗಿದೆ.
೩. ತಾವು ವರ್ಷ ೨0೨೫ ರಲ್ಲೂ ದೂರು ದಾಖಲಿಸಲು ಪ್ರಯತ್ನಿಸಿದ್ದೆವು; ಆದರೆ ಆ ಸಮಯದಲ್ಲಿ ತಮ್ಮ ಮಾತನ್ನು ಕೇಳಿಸಿಕೊಳ್ಳಲಿಲ್ಲ ಮತ್ತು ತಮಗೆ ಕಿರುಕುಳವನ್ನು ಎದುರಿಸಬೇಕಾಯಿತು ಎಂದು ರಿಂಕಿ ಚಟರ್ಜಿ ಸಿಂಗ್ ದಾವೆ ಮಾಡಿದ್ದಾರೆ.
೪. ತೃಣಮೂಲ ಕಾಂಗ್ರೆಸ್‌ನ ಡಾರ್ಜಿಲಿಂಗ್ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಅತ್ರಿ ಶರ್ಮಾ ಅವರೂ ಸಹ ಈ ಹೇಳಿಕೆಯು ಅಯೋಗ್ಯವಾಗಿದೆ ಎಂದು ಹೇಳಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!