
ನವ ದೆಹಲಿ – ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಮತ್ತು ಅತ್ಯಂತ ಪ್ರಮುಖ ಅಂಗಗಳಾಗಿವೆ ಎಂದು ಭಾರತವು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರ ಚೀನಾ ಪ್ರವಾಸದ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ಪಾಕಿಸ್ತಾನವು ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಚೀನಾಕ್ಕೆ ಮಾಹಿತಿ ನೀಡಿದೆ ಎಂದು ತಿಳಿಸಲಾಗಿತ್ತು. ಇದರ ನಂತರ ಚೀನಾ, ಜಮ್ಮು-ಕಾಶ್ಮೀರದ ವಿಷಯವು ಇತಿಹಾಸಕ್ಕೆ ಸಂಬಂಧಿಸಿದ ವಿವಾದವಾಗಿದೆ ಮತ್ತು ಇದರ ಪರಿಹಾರವನ್ನು ವಿಶ್ವಸಂಸ್ಥೆಯ ನಿರ್ಣಯ ಹಾಗೂ ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಶಾಂತಿಯುತವಾಗಿ ಪರಿಹರಿಸಬೇಕು ಎಂದು ಹೇಳಿತ್ತು.
ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್‌ನಂತಹ ಕೆಲವು ಯೋಜನೆಗಳು ಭಾರತೀಯ ಪ್ರದೇಶಗಳ ಮೂಲಕ ಹಾದುಹೋಗುತ್ತವೆ, ಅದರ ಮೇಲೆ ಪಾಕಿಸ್ತಾನವು ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ನಿಯಂತ್ರಣ ಸಾಧಿಸಿದೆ. ಪಾಕಿಸ್ತಾನದ ಈ ನಿಯಂತ್ರಣವನ್ನು ಬಲಪಡಿಸುವ ಅಥವಾ ಅದಕ್ಕೆ ಕಾನೂನುಬದ್ಧ ಮಾನ್ಯತೆ ನೀಡಲು ಪ್ರಯತ್ನಿಸುವ ಯಾವುದೇ ಪ್ರಯತ್ನಗಳನ್ನು ಭಾರತವು ಯಾವಾಗಲೂ ವಿರೋಧಿಸುತ್ತದೆ. ಚೀನಾ ಮತ್ತು ಪಾಕಿಸ್ತಾನ ದೇಶಗಳ ನಡುವೆ ಯಾವುದೇ ಸಾಮಾನ್ಯ ಗಡಿ ಇಲ್ಲ. ಭಾರತವು ೧೯೬೩ ರ ಚೀನಾ-ಪಾಕಿಸ್ತಾನ ಗಡಿ ಒಪ್ಪಂದವನ್ನು ಎಂದಿಗೂ ಮಾನ್ಯ ಮಾಡಿಲ್ಲ ಎಂದು ಹೇಳಿದರು.
ಈ ಒಪ್ಪಂದದ ಪ್ರಕಾರ, ಪಾಕಿಸ್ತಾನವು ಜಮ್ಮು-ಕಾಶ್ಮೀರದ ಶಕ್ಸಗಾಮ್ ಕಣಿವೆಯ ಪ್ರದೇಶವನ್ನು ಚೀನಾಕ್ಕೆ ನೀಡಿತ್ತು, ಇದರ ಮೇಲೆ ಅದು ೧೯೪೮ ರಲ್ಲಿ ಕಾನೂನುಬಾಹಿರವಾಗಿ ನಿಯಂತ್ರಣ ಸಾಧಿಸಿತ್ತು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು