ಇಸ್ರೇಲ್‌ನಿಂದ ಭಾರತಕ್ಕೆ ಒತ್ತಾಯ

ತೆಲ್ ಅವಿವ್ (ಇಸ್ರೇಲ್) – ಇರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ (‘ಐ.ಆರ್.ಜಿ.ಸಿ.’) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಅದರ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಇಸ್ರೇಲ್ ಭಾರತವನ್ನು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಇಸ್ರೇಲ್‌ನ ಉನ್ನತ ಅಧಿಕಾರಿಗಳು ಭಾರತಕ್ಕೆ ವಿನಂತಿ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
🇮🇱 Israel has urged India to declare Iran’s IRGC a terror group, citing its role in missile development, control over the Strait of Hormuz, and backing of proxy groups like Hezbollah & the Houthis.
44 countries, including Australia & several EU nations, have already sanctioned… pic.twitter.com/vGLiXTIP2o
— Sanatan Prabhat (@SanatanPrabhat) May 27, 2026
ಈ ವಿಷಯದಲ್ಲಿ ಭಾರತವು ನಿರ್ಧಾರ ತೆಗೆದುಕೊಳ್ಳುವಂತೆ ಇಸ್ರೇಲ್ ಪದೇ ಪದೇ ವಿನಂತಿಸಿದೆ ಎಂದು ಇಸ್ರೇಲಿ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಐ.ಆರ್.ಜಿ.ಸಿ.ಯಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಮಾತ್ರವಲ್ಲದೆ ಇತರ ಪ್ರದೇಶಗಳಿಗೂ ಅಪಾಯ ಉಂಟಾಗಿದೆ. ಕೆಲವು ದೇಶಗಳು ಈಗಾಗಲೇ ಐ.ಆರ್.ಜಿ.ಸಿ. ವಿರುದ್ಧ ಕ್ರಮ ಕೈಗೊಂಡಿವೆ ಎಂದೂ ಇಸ್ರೇಲ್ ಉಲ್ಲೇಖಿಸಿದೆ. ಭಾರತವೂ ಸಹ ಐ.ಆರ್.ಜಿ.ಸಿ.ಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಅದರ ಮೇಲೆ ಕಠಿಣ ನಿರ್ಬಂಧಗಳನ್ನು ವಿಧಿಸಬೇಕು ಎಂದು ಇಸ್ರೇಲ್ ಒತ್ತಾಯಿಸಿದೆ. ಆಸ್ಟ್ರೇಲಿಯಾ ಮತ್ತು ಯುರೋಪಿಯನ್ ಯೂನಿಯನ್ ಈಗಾಗಲೇ ಐ.ಆರ್.ಜಿ.ಸಿ. ಮೇಲೆ ನಿರ್ಬಂಧಗಳನ್ನು ವಿಧಿಸಿವೆ ಎಂದು ಇಸ್ರೇಲ್ ಹೇಳಿದೆ.
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !
ಟೆಕ್ಸಾಸ್ (ಅಮೆರಿಕ) ನಲ್ಲಿ ಭಾರತದ ರಾಷ್ಟ್ರಧ್ವಜ ಹರಿದ ಅಮೆರಿಕನ್ ಯುವಕ