ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಸುಮನ ಕುಮಾರ ರಾಯ ಅವರ ಹೇಳಿಕೆ

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ತಾರಿಕ್ ರೆಹಮಾನ್ ಅವರ ಸರಕಾರ ರಚನೆಯಾಗಿ 100 ದಿನಗಳು ಪೂರೈಸಿವೆ. ಈ ಸಂದರ್ಭದಲ್ಲಿ ಅವರ ಕಾರ್ಯವೈಖರಿಯು ಅಲ್ಲಿನ ಹಿಂದೂಗಳ ಜೀವನದ ಮೇಲೆ ಬೀರಿದ ಪರಿಣಾಮಗಳ ಕುರಿತು ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ‘ಬಾಂಗ್ಲಾದೇಶ ಸನಾತನ ಪಾರ್ಟಿ’ಯ ಪ್ರಧಾನ ಕಾರ್ಯದರ್ಶಿ ಶ್ರೀ. ಸುಮನ ಕುಮಾರ ರಾಯ ಅವರು ಮಾತನಾಡುತ್ತಾ, ಹೊಸ ಸರಕಾರವು ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ಒಟ್ಟಾರೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯು ತೀವ್ರ ಕಳವಳದ ವಿಷಯವಾಗಿದೆ ಎಂದು ತಿಳಿಸಿದರು. ದೇಶದ ವಿವಿಧ ಭಾಗಗಳಲ್ಲಿ ಕೊಲೆ, ನಾಪತ್ತೆ, ಅತ್ಯಾಚಾರ, ದರೋಡೆ ಮತ್ತು ದೌರ್ಜನ್ಯದ ಘಟನೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಅಲ್ಪಸಂಖ್ಯಾತ ಹಿಂದೂಗಳು ಹೆಚ್ಚುತ್ತಿರುವ ಅಸುರಕ್ಷಿತತೆಯನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಧಾರ್ಮಿಕ ಭಾವನೆಗಳ ಹೆಸರಿನಲ್ಲಿ ನಡೆಯುವ ದಾಳಿಗಳು, ಧ್ವಂಸ, ಅವಮಾನ, ಭೂಮಿ ಒತ್ತುವರಿ, ದೇವಸ್ಥಾನಗಳ ವಶಪಡಿಸಿಕೊಳ್ಳುವಿಕೆ ಮತ್ತು ಸುಲಿಗೆಯಂತಹ ಕೃತ್ಯಗಳು ಸೇರಿವೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’