
ತಿರುವನಂತಪುರಂ (ಕೇರಳ) – ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕತ್ತುಗಳು ಮತ್ತು ನಾಣ್ಯಗಳು ನಾಪತ್ತೆಯಾಗಿವೆ ಹಾಗೂ ದೇವಸ್ಥಾನದಲ್ಲಿ ಭದ್ರತೆಯ ಲೋಪ ಉಂಟಾಗಿದೆ ಎಂಬ ಸುದ್ದಿ ಗುಪ್ತಚರ ವರದಿಯ ಉಲ್ಲೇಖದೊಂದಿಗೆ ಪ್ರಕಟವಾಗಿತ್ತು. ಈ ಎಲ್ಲಾ ಸುದ್ದಿಗಳನ್ನು ದೇವಸ್ಥಾನದ ಆಡಳಿತ ಮಂಡಳಿಯು ಸಂಪೂರ್ಣವಾಗಿ ತಿರಸ್ಕರಿಸಿದೆ. ಇವೆಲ್ಲವೂ ಕೇವಲ ಸುಳ್ಳು ಮತ್ತು ಆಧಾರರಹಿತ ವದಂತಿಗಳಾಗಿವೆ ಎಂದು ಮಂಡಳಿಯು ಸ್ಪಷ್ಟಪಡಿಸಿದೆ.
೧. ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿ, ಭಕ್ತರು ನೀಡಿದ ದೇಣಿಗೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಮತ್ತು ಭದ್ರತೆಯಲ್ಲಿ ಲೋಪಗಳಿವೆ ಎಂಬ ಆರೋಪಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ಪವಿತ್ರ ಕ್ಷೇತ್ರವನ್ನು ಅಪಖ್ಯಾತಿಗೊಳಿಸಲು ಮತ್ತು ಜನರಲ್ಲಿ ಗೊಂದಲ ಮೂಡಿಸಲು ಉದ್ದೇಶಪೂರ್ವಕವಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಪದ್ಮನಾಭಸ್ವಾಮಿ ದೇವಸ್ಥಾನದ ಅಪಾರ ಸಂಪತ್ತು ಮತ್ತು ಆಭರಣಗಳನ್ನು ಅತ್ಯಂತ ಕಟ್ಟುನಿಟ್ಟಾದ ಭದ್ರತೆ ಹಾಗೂ ಪವಿತ್ರ ಭಾವನೆಯಿಂದ ಸುರಕ್ಷಿತವಾಗಿಡಲಾಗಿದೆ ಎಂದು ಅವರು ಭರವಸೆ ನೀಡಿದರು.
೨. ದೇವಸ್ಥಾನದ ಸಂಪೂರ್ಣ ಆವರಣವು ಯಾವಾಗಲೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಇರುತ್ತದೆ. ಇಲ್ಲಿನ ಭದ್ರತಾ ವಿಭಾಗ ಮತ್ತು ಪೊಲೀಸ್ ಸಿಬ್ಬಂದಿ ಇದರ ಮೇಲೆ ನಿಗಾ ಇಟ್ಟಿರುತ್ತಾರೆ. ಯಾವುದೇ ಬೆಲೆಬಾಳುವ ವಸ್ತುವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾಗಿದ್ದರೂ, ಅದನ್ನು ಮೊದಲು ಭದ್ರತಾ ಅಧಿಕಾರಿಗಳ ಗಮನಕ್ಕೆ ತಂದು ಅವರ ಸಮ್ಮುಖದಲ್ಲೇ ಕೊಂಡೊಯ್ಯಲಾಗುತ್ತದೆ. ದೇವಸ್ಥಾನದೊಳಗೆ ಹೋಗುವ ಮತ್ತು ಹೊರಗೆ ಬರುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ. ಹಾಗಿರುವಾಗ ದೇವಸ್ಥಾನದಲ್ಲಿ ಯಾವುದೇ ರೀತಿಯ ಕಳ್ಳತನ ಅಥವಾ ಅಕ್ರಮ ನಡೆದಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
೩. ದೇವಸ್ಥಾನಕ್ಕೆ ಬರುವ ಭಕ್ತರು ಮತ್ತು ಸಾರ್ವಜನಿಕರು ಇಂತಹ ಯಾವುದೇ ವದಂತಿಗಳನ್ನು ನಂಬಬಾರದು ಎಂದು ಆಡಳಿತ ಮಂಡಳಿ ವಿನಂತಿಸಿದೆ.
೪. ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು ಶತಮಾನಗಳಿಂದ ಭಕ್ತಿ, ನಂಬಿಕೆ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿ ನಿಂತಿದೆ. ದೇವಸ್ಥಾನದ ಮೇಲಿರುವ ಭಕ್ತರ ನಂಬಿಕೆಯು ಸಂಪೂರ್ಣವಾಗಿ ಸಾರ್ಥಕವಾಗಿದ್ದು, ಭಯಪಡುವ ಅಥವಾ ಚಿಂತಿಸುವ ಯಾವುದೇ ಅಗತ್ಯವಿಲ್ಲ ಎಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
ಬೆಂಗಳೂರಿನ 97 ಲಕ್ಷ ಮತದಾರರಲ್ಲಿ 3.5–4 ಲಕ್ಷ ಮತದಾರರು ಅಸಿಂಧು ಮತದಾರರಾಗಿರಬಹುದು!”
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಭಾವಪೂರ್ಣ ಧಾರ್ಮಿಕ ವಿಧಿಗಳೊಂದಿಗೆ ಸಂಪನ್ನಗೊಂಡ ಶ್ರೀ ರಾಜಮಾತಂಗಿ ಮಹಾಯಜ್ಞ !
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ದೆಹಲಿಯ ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ: 21 ಜನರ ಸಾವು