ರಾಜ್ಯದಲ್ಲಿನ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇವರ ಆಗ್ರಹ

ಮೈಸೂರು – ‘ಹೊಸ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ೩ ಹುದ್ದೆಗಳನ್ನು ನೀಡಬೇಕು’ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಇಲ್ಲಿ ಮೇ ೧೮ ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಕಾಂಗ್ರೆಸ್ ಸರಕಾರಗಳಲ್ಲಿ ನಮ್ಮ ಸಮುದಾಯಕ್ಕೆ ಕನಿಷ್ಠ ೩ ಹುದ್ದೆಗಳನ್ನು ನೀಡಲಾಗುತ್ತಿತ್ತು. ಆದರೆ ೨೦೨೩ ರಿಂದ ೨೦೨೬ ರ ಅವಧಿಯಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದೆ. ಹಾಗಾಗಿ ಮತ್ತೊಬ್ಬರಿಗೆ ಅವಕಾಶ ನೀಡಬೇಕು” ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ, ಸಚಿವ ಸಂಪುಟ ಪುನರ್ರಚನೆಯ ಬದಲಿಗೆ ಹೊಸದಾಗಿ ಸಂಪುಟವನ್ನು ರಚಿಸಲಾಗುತ್ತಿದೆ. ನಾನು ಕೂಡ ಈ ಹುದ್ದೆಯ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಸೇಠ್ ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!