ಕೇರಳಮ್‌ದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆರೋಪ

ತಿರುವನಂತಪುರಂ (ಕೇರಳಮ್) – ಸಂಪೂರ್ಣ ‘ವಂದೇ ಮಾತರಂ’ ಹಾಡುವ ಅಗತ್ಯವಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ‘ವಂದೇ ಮಾತರಂ’ನ ಮೊದಲ 2 ನುಡಿಗಳನ್ನು ಮಾತ್ರ ಹಾಡುತ್ತಿರುವಾಗ ಎದ್ದು ನಿಲ್ಲುವ ಅಗತ್ಯವೂ ಇಲ್ಲ. ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಹಾಡುವುದು ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿಯ ಭಾಗವಾಗಿದೆ. ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಂಪೂರ್ಣ ಗೀತೆಯನ್ನು ಹಾಡಲಾಯಿತು, ಇದು ಆಗಬಾರದಿತ್ತು. ಆ ನಂತರ ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಂಡಂತೆ ಕಾಣುತ್ತಿದೆ. ಇದೇ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕೇರಳಮ್‌ದ ಮಾಜಿ ಮುಖ್ಯಮಂತ್ರಿ ಮತ್ತು ಈಗಿನ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರ ಭಾಷಣದ ಸಮಯದಲ್ಲಿ ಕೇರಳಮ್ ವಿಧಾನಸಭೆಯಲ್ಲಿ ಸಂಪೂರ್ಣ ‘ವಂದೇ ಮಾತರಂ’ ಹಾಡದೆ ರಾಷ್ಟ್ರಗೀತೆಗೆ ಅಪಮಾನ ಮಾಡಲಾಗಿದೆ ಎಂದು ಭಾಜಪ ಆರೋಪಿಸಿತ್ತು. ಇದರ ನಂತರ ವಿಜಯನ್ ಈ ಪ್ರಕರಣದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಅನ್ನು ಪೂರ್ಣವಾಗಿ ಪ್ರಸ್ತುತಪಡಿಸಲು ಕೇಂದ್ರ ಸರಕಾರದ ನಿರ್ದೇಶನಗಳಿವೆ; ಆದರೆ ಕೇರಳಮ್ ವಿಧಾನಸಭೆಯು ಅದನ್ನು ಪಾಲಿಸಲಿಲ್ಲ. ಇದು ರಾಜ್ಯಪಾಲರಿಗೆ ಮಾಡಿದ ಅಪಮಾನ. 150 ನೇ ವಾರ್ಷಿಕೋತ್ಸವದ ನಿಮಿತ್ತ ‘ವಂದೇ ಮಾತರಂ’ಗೆ ಅನಾಚಾರ ಮಾಡಲಾಗಿದೆ ಎಂದು ಭಾಜಪದ ಹಿರಿಯ ನಾಯಕ ಮತ್ತು ಶಾಸಕ ವಿ. ಮುರಳೀಧರನ್ ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ